ಮೈಸೂರು:ಎದೆಗಾರಿಕೆ ಇರುವ ಪ್ರತಿಪಕ್ಷ ನಾಯಕ ಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆಯಾಗುತ್ತದೆ. ಯತ್ನಾಳ್ ಅಂದರೆ ಒಂದು ಹವಾ ಇದೆ. ಅವರು ರಾಷ್ಟ್ರೀಯತೆ, ಹಿಂದುತ್ವ ಸೇರಿದಂತೆ ಎಲ್ಲವನ್ನೂ ಗಟ್ಟಿಯಾಗಿ ಪ್ರತಿಪಾದಿಸುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಮೂಲಕ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ಪ್ರತಾಪ್ ಸಿಂಹ ಬ್ಯಾಟ್ ಬೀಸಿದ್ದಾರೆ.
‘ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ’ ಎಂಬ ಎಂ‌.ಬಿ. ಪಾಟೀಲ್ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ. ಎಂ.ಬಿ. ಪಾಟೀಲ್​ಗೆ ಈಗ ಸಿಕ್ಕಿರುವ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತಿದೆ. ಕೂತ ಕಡೆ ಕಂತೆ ಕಂತೆ ಕಾಸು ಬರುವ ಖಾತೆ ಸಿಗಲಿಲ್ಲವೆಂದು ವಿಲವಿಲ ಒದ್ದಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಓಲೈಕೆ ಮಾಡುವುದೇ ತಮ್ಮ ಖಾತೆ ಜವಾಬ್ದಾರಿ ಎಂದು ಪಾಟೀಲ್ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಬಂದೂಕಿಗೆ ಹೆಗಲು ಕೊಡುವುದೇ ನಿಮ್ಮ ಕೆಲಸವಾ ಎಂದು ಸಂಸದ ಪ್ರತಾಪ್ ಸಿಂಹ ಎಂ‌.ಬಿ.ಪಾಟೀಲ್ ವಿರುದ್ಧ ಕಿಡಿಕಾಡಿದ್ದಾರೆ.
ಇದನ್ನೂ ಓದಿ:ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಕೆಗೆ ಸರ್ವರ್ ಡೌನ್; ಸೈಬರ್ ಕಳ್ಳರ ಬಗ್ಗೆ ಎಚ್ಚರವಿರಿ ಎಂದ ತಜ್ಞರುಸಚಿವರಾದ ಎಚ್​​.ಸಿ.ಮಹದೇವಪ್ಪ, ಎಂ.ಬಿ. ಪಾಟೀಲ್ ಇಬ್ಬರು ಮಾತನಾಡುತ್ತಾ ಐದು ವರ್ಷವೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಅಧಿಕಾರ ಬಿಟ್ಟು ಕೊಡುವ ಇರಾದೆ ಇಲ್ಲ. ಅವರಿಗೆ ನಾನೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತೇನೆ ಎಂದು ಹೇಳುವ ಧೈರ್ಯವೂ ಇಲ್ಲ. ಇದಕ್ಕಾಗಿ ತಮ್ಮ ಛೇಲಾ ಪಡೆ ಮೂಲಕ ‘ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ’ ಎಂದು ಹೇಳಿಸುತ್ತಿದ್ದಾರೆ. ಕಾಂಗ್ರೆಸ್ ಚುನಾವಣೆ ಗೆಲ್ಲವಲ್ಲಿ ಡಿಕೆಶಿ ಪಾತ್ರ ದೊಡ್ಡದಿದೆ. ಹೀಗಿದ್ದರೂ ಕಾಂಗ್ರೆಸ್ ಧಾರಾಳಾ ಮನಸ್ಸಿನಿಂದ ಸಿದ್ದರಾಮಯ್ಯ ಅವರನ್ನು ಎರಡನೇ ಬಾರಿ ಸಿಎಂ ಮಾಡಿದೆ. ಆದರೆ ಅವರಿಗೆ ಉದಾರತನದ ಮನಸ್ಸು ಇಲ್ಲ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದರು.
ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಬಿಜೆಪಿ ಒತ್ತಡ ತರಲಿ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, 5 ಕೆಜಿ ಅಕ್ಕಿ ಕೊಡುವುದು ಕೇಂದ್ರ ಸರ್ಕಾರ ಎಂದು ಪ್ರಥಮ ಬಾರಿಗೆ ಸತ್ಯ ಹೇಳಿದ್ದಕ್ಕೆ ಧನ್ಯವಾದ. ಮೋದಿ ಅವರ ಐದು ಕೆ.ಜಿಗೆ 10 ಕೆಜಿ ಸೇರಿಸಿ ನೀವು ಅಕ್ಕಿ ಕೊಡಬೇಕು. ಮೋದಿ ಸರ್ಕಾರದ ಅಕ್ಕಿ ಸಿದ್ರಾಮಣ್ಣನ ಜಾತ್ರೆನಾ? ಮೋದಿ ಅವರು ಕೊಡುವ ಅಕ್ಕಿಯಿಂದ ನೀವು ಚುನಾವಣೆ ಗೆದ್ದು ಬರಬೇಕಾ? ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿ ಮಾಡಿ. ಸಾಧ್ಯವಾಗದಿದ್ದರೆ ಗಂಡನ ಅಕೌಂಟ್​ಗೆ ಅಕ್ಕಿಯ ಹಣ ಹಾಕಿ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಎಲ್ಲಾ ಕಡೆ ಚುನಾವಣೆ ಇದೆ. ಅಲ್ಲೂ ನೀವು ಫ್ರೀ ಅಕ್ಕಿ ಘೋಷಣೆ ಮಾಡಿದರೆ ಅಕ್ಕಿ ಕೊಡುವುದಕ್ಕೆ ಸಾಧ್ಯವಾ? ಅಕ್ಕಿಯನ್ನು ತಯಾರಿಸಲು ಸಾಧ್ಯವಿಲ್ಲ. ಮುಂಗಾರು ಕೈ ಕೊಟ್ಟಿದೆ. ಬರ ಬಂದರೆ, ಜಲಾಪ್ರಳಯವಾದರೆ ಅಕ್ಕಿ ಕೊಡಬೇಕಾದರೆ ಕೇಂದ್ರ ಏನು ಮಾಡಬೇಕು ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಅಧಿಕಾರ ಹಂಚಿಕೆಯಾಗಿಲ್ಲ, 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ: ಸತೀಶ್ ಜಾರಕಿಹೊಳಿ
ವಿದ್ಯುತ್ ದರ ಮಿತಿಮೀರಿ ಏರಿಕೆಯಾಗಿದೆ. ಕೈಗಾರಿಕಾ ಉದ್ಯಮಿಗಳು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿದ್ದಾರೆ. 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದೀರಿ. ನಿಮ್ಮ ಮನೆಯಲ್ಲಿ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬ ಅರಿವು ನಿಮಗೆ ಇಲ್ವಾ? ನಿಮ್ಮದು ದೋಖಾ ಸರ್ಕಾರ ಅಲ್ವಾ? ನಿಮ್ಮ ಮನೆಯಲ್ಲೇ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿಲ್ವಾ? ನಿಮ್ಮದು ದೋಖಾ ಸರಕಾರ ಎಂಬುದು ಸಾಬೀತಾಗಿದೆ. ಉಚಿತ ಯೋಜನೆಗಳು ಒಂದರ್ಥದಲ್ಲಿ ಗಂಡನನ್ನು ದರೋಡೆ ಮಾಡಿ ಪತ್ನಿಗೆ ಕೊಟ್ಟಂತಾಗಿದೆ. ಗಂಡನ ಜೇಬಿಗೆ ಕತ್ತರಿ ಹಾಕಿ ಪತ್ನಿಗೆ ಕೊಡುವುದರಲ್ಲಿ ಏನೂ ಅರ್ಥ ಇದೆ ಹೇಳಿ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fifteen =
Remember me
