ಚಿಕ್ಕಬಳ್ಳಾಪುರ:ಇಲ್ಲಿನ ನಗರಸಭೆಯಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಇದ್ದರೂ ಅಧಿಕಾರ ಹಿಡಿದಿದ್ದು ಬಿಜೆಪಿ. ಅದರಲ್ಲೂ ಇದೇ ಮೊದಲ ಬಾರಿಗೆ ಬಿಜೆಪಿ ಗದ್ದುಗೆಗೆ ಏರುವ ಮೂಲಕ ಹೊಸ ದಾಖಲೆ ಬರೆದಿದೆ. ಆದರೆ ಇದು ಸಾಧ್ಯವಾಗಿದ್ದು ಮಾತ್ರ ಆಪರೇಶನ್​ ಕಮಲದ ಮೂಲಕ.
ನಗರಸಭಾ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಆನಂದ್ ರೆಡ್ಡಿ ಬಾಬು ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್ ನ ವೀಣಾರಾಮು ಆಯ್ಕೆಯಾಗಿದ್ದಾರೆ. ನಗರಸಭೆಯ 31 ಸದಸ್ಯರ ಪೈಕಿ ಕಾಂಗ್ರೆಸ್ 16, ಬಿಜೆಪಿ 9, ಪಕ್ಷೇತರ 4 ಮತ್ತು ಜೆಡಿಎಸ್ 2 ಸದಸ್ಯರಿದ್ದಾರೆ. ಪಕ್ಷ ಸ್ಪಷ್ಟ ಬಹುಮತವನ್ನು ಹೊಂದಿದ್ದರೂ ಕಾಂಗ್ರೆಸ್ ನ ಅಂಬಿಕಾ ನಾರಾಯಣಸ್ವಾಮಿ ಅಧ್ಯಕ್ಷ ಸ್ಥಾನಕ್ಕೆ ಪಡೆದ ಮತ ಕೇವಲ 9. ಉಳಿದಂತೆ ಆನಂದ್ ರೆಡ್ಡಿ 22 ಮತಗಳೊಂದಿಗೆ ಗೆಲುವಿನ ನಗೆ ಬೀರಿದ್ದಾರೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಅವರ ಆಪರೇಷನ್ ಕಮಲ ತಂತ್ರಗಾರಿಕೆಯಲ್ಲಿ ಬಿಜೆಪಿ 9, ಪಕ್ಷೇತರ 4, ಜೆಡಿಎಸ್ 2 ಮತ್ತು ಕಾಂಗ್ರೆಸ್ 4 ಮತಗಳು, ಸಂಸದ, ಶಾಸಕ, ವಿಧಾನಪರಿಷತ್ ಸದಸ್ಯ ಮತ ಸೇರಿ ಮತ ಬಲ 22 ಆಗಿದೆ. ಉಳಿದಂತೆ ಕಾಂಗ್ರೆಸ್​​ನ 3 ಸದಸ್ಯರು ತಟಸ್ಥವಾಗಿ ಉಳಿಯುವ ಮೂಲಕ ಸ್ವಪಕ್ಷೀಯರಿಗೆ ಹೊಡೆತ ಕೊಟ್ಟರು. ಮತ್ತೊಂದೆಡೆ ಹಿಂದೆ ಕೇವಲ ಒಂದೇ ಒಂದು ಸದಸ್ಯ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುತ್ತಿದ್ದ ಬಿಜೆಪಿ ಗದ್ದುಗೇರುವ ಮೂಲಕ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
