ಹುಬ್ಬಳ್ಳಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪಾಲ್ಗೊಳ್ಳುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನಜಾಗೃತಿ ಸಭೆಗೆ ಪೂರ್ವಸಿದ್ಧತೆ ಭರದಿಂದ ಸಾಗಿದೆ. ಜನಜಾಗೃತಿಗಾಗಿ ಅಮಿತ್ ಷಾ ಪಾಲ್ಗೊಳ್ಳುತ್ತಿರುವ ದಕ್ಷಿಣ ಭಾರತದ ಮೊದಲ ಸಮಾವೇಶ ಇದಾಗಿದ್ದು, ಭರ್ಜರಿ ಯಶಸ್ವಿಯಾಗ ಬೇಕು ಎಂದು ಬಿಜೆಪಿ ಪಡೆ ಸಂಕಲ್ಪ ಮಾಡಿದೆ.
ಜ.18ಕ್ಕೆ ನೆಹರು ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಧಾರವಾಡ ಹಾಗೂ ಸುತ್ತಲಿನ ಜಿಲ್ಲೆಗಳ ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಿಎಂ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ಸೇರಿ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ. ಕುಂದಗೋಳ, ಕಲಘಟಗಿ, ಧಾರವಾಡ, ನವಲಗುಂದ ಮುಖಾಂತರ ಬರುವವರಿಗಾಗಿ ನಗರದ ಹೊರ ವಲಯದಲ್ಲಿ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಜನ ಹೆಚ್ಚು ಸೇರುವ ಕಾರಣ ಮೈದಾನ ಹಾಗೂ ಪಕ್ಕದ ಸರ್ ಸಿದ್ದಪ್ಪ ಕಂಬಳಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಸೇರಿ ವಿವಿಧೆಡೆ ಎಲ್​ಇಡಿ ಸ್ಕ್ರೀನ್ ಅಳವಡಿಸಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ. ಎಲ್ಲ ಜವಾಬ್ದಾರಿ ನಿರ್ವಹಿಸುವುದಕ್ಕಾಗಿ ಈಗಾಗಲೇ 25 ಸಮಿತಿ ರಚಿಸಿ, ಕಾರ್ಯಕರ್ತರಿಗೆ ಜವಾಬ್ದಾರಿ ಹಂಚಲಾಗಿದೆ. ವಿವಿಧ ಮಠಾಧೀಶರಿಗೆ ಆಮಂತ್ರಣ ನೀಡಲಾಗುತ್ತಿದ್ದು, ಪಕ್ಷದ ಮುಖಂಡರು ಮೇಲಿಂದ ಮೇಲೆ ಸಭೆಗಳನ್ನು ನಡೆಸಿ ಪೂರ್ವಸಿದ್ಧತೆಯಲ್ಲಿ ತೊಡಗಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಚಿವ ಜಗದೀಶ ಶೆಟ್ಟರ್ ಉಸ್ತುವಾರಿ ವಹಿಸಿದ್ದಾರೆ.
ಪ್ರತಿಭಟಿಸಲಿದೆ ಕಾಂಗ್ರೆಸ್:ಉ.ಕ.ದಲ್ಲಿ ನೆರೆ ಹಾವಳಿ ಬಂದಾಗ ಆಗಮಿಸದ ಅಮಿತ್ ಷಾ, ಈ ಭಾಗಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಮಹದಾಯಿ ವಿವಾದ ಬಗೆಹರಿಸಿಲ್ಲ ಎಂದು ಆರೋಪಿಸಿ ‘ಗೋ ಬ್ಯಾಕ್ ಅಮಿತ್ ಷಾ’ ಘೊಷಣೆಯೊಂದಿಗೆ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್ಲ 17 ಮಂದಿ ಒಗ್ಗಟ್ಟಾಗಿದ್ದು, ಸಚಿವ ಸ್ಥಾನ ನೀಡಬೇಕು ಎನ್ನುವುದು ನಮ್ಮ ಆಗ್ರಹ. ಅದನ್ನು ಕೇಳುವುದೂ ನಮ್ಮ ಹಕ್ಕಾಗಿದೆ. ಒಂದು ವೇಳೆ ಸಚಿವ ಸ್ಥಾನ ಕೊಡದೆ ಇದ್ದಲ್ಲಿ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚಿಂತನೆ ಮಾಡುತ್ತೇವೆ. ನಾಳೆ, ನಾಳಿದ್ದು ಏನಾಗುತ್ತದೆಂದು ಈಗಲೇ ಹೇಗೆ ಹೇಳಲು ಸಾಧ್ಯ?
| ಎಚ್.ವಿಶ್ವನಾಥ್ಮಾಜಿ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
