
ಬೆಂಗಳೂರು:ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷಿಕರಿಗೆ ಕನ್ನಡ ಕಲಿಸುವ ಪ್ರಯತ್ನ ನಡೆಯಬೇಕು ಎಂದು ಸಂಸದ ಪಿ.ಸಿ. ಮೋಹನ್ ಕರೆ ನೀಡಿದರು.ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದಿನವೂ ನಾವು ಕನ್ನಡದ ಒಂದಷ್ಟು ಪದಗಳನ್ನು ಕಳಕೊಳ್ಳುವ ಪರಿಸ್ಥಿತಿ ಇದೆ ಎಂದು ಆತಂಕಿಸಿದರು.ಬೆಂಗಳೂರಿನ ಕನ್ನಡಿಗರು ವಿಶಾಲ ಹೃದಯಿಗಳು. ಯಾರಾದರೂ ಕನ್ನಡ ಅಲ್ಪಸ್ವಲ್ಪ ಕಲಿತು ಮಾತನಾಡುತ್ತಿದ್ದರೂ ಅವರು ಕನ್ನಡದಲ್ಲಿ ಮಾತನಾಡಲು ಅವಕಾಶ ಕೊಡದೆ ಅವರ ಭಾಷೆಯಲ್ಲೇ ನಾವು ಮಾತನಾಡುತ್ತೇವೆ. ಅದನ್ನು ನಿಲ್ಲಿಸಿ ಕನ್ನಡದಲ್ಲೇ ಮಾತನಾಡಿ ಎಂದು ಹೇಳುವ ಮೂಲಕ ಕನ್ನಡತನ ಉಳಿಸಬೇಕು ಎಂದರು.ಕಳೆದ ವರ್ಷ ಯಥೇಚ್ಛವಾಗಿ ಮಳೆ ಬಂದಿತ್ತು. ಈ ವರ್ಷ ಮಳೆಯ ಕೈಕೊಟ್ಟಿದೆ. ಕಾವೇರಿಯ ನೀರಿಲ್ಲ. ಈ ನಡುವೆ ಸುಪ್ರೀಂ ಕೋರ್ಟಿನ ಸೂಚನೆಯಂತೆ ನಿತ್ಯ 2600 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡಬೇಕಾದ ಪರಿಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು. ಕಾವೇರಿ ನೀರು, ಕುಡಿಯುವ ನೀರಿನ ಕಡೆ ಸರ್ಕಾರ ಹೆಚ್ಚಿನ ಗಮನ ಕೊಡಬೇಕು ಎಂದು ಅವರು ಸಲಹೆ ನೀಡಿದರು.ಕರ್ನಾಟಕ ಎಂದು ನಾಮಕರಣ ಮಾಡಿ ಇವತ್ತಿಗೆ 50 ವರ್ಷಗಳಾಗಿರುವುದು ಸಂತಸದ ವಿಚಾರ ಎಂದು, ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದರು.ಎಂ.ಎಲ್.ಎ. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಗಣಪತಿ ಹೆಗಡೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಜಿ.ಮಂಜುನಾಥ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನಾಡು, ನುಡಿ ವಿಷಯದಲ್ಲಿಕೇಂದ್ರಕ್ಕೆ ನಿಯೋಗದ ಭರವಸೆನಾಡಿನ ನೆಲ, ಜಲ, ಭಾಷೆ ವಿಚಾರ ಬಂದಾಗ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ನಾವೆಲ್ಲರೂ ಕೂಡ ಹೋಗಿ ಕೇಂದ್ರಕ್ಕೆ ನಿಯೋಗ ತೆರಳಿ ಮನವಿ ಮಾಡುತ್ತೇವೆ ಎಂದು ಸಂಸದ ಪಿ.ಸಿ.ಮೋಹನ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸಂಸದರು ಈ ಸಂಬಂಧ ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಬಳಿ ಮಾತನಾಡಿದ್ದೇವೆ. ಸೂಕ್ತ ಸಮಯದಲ್ಲಿ ಕೇಂದ್ರ ಸರಕಾರದ ಪ್ರಮುಖರನ್ನು ಭೇಟಿ ಮಾಡಲಿದ್ದೇವೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seventeen =
Remember me
