ಬೆಂಗಳೂರು:ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೂಡಲೇ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿಟಿ ರವಿ, ಬಸನಗೌಡ ಪಾಟೀಲ್ ಯಾತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದರೆ, ಇನ್ನು ಈಶ್ವರಪ್ಪ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದಾರೆ.
ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮಸಂವಿಧಾನದ ಘನತೆ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ ತನ್ನದಲ್ಲದ ತಪ್ಪಿಗೂ ನೈತಿಕ ಹೊಣೆ ಹೊತ್ತು ಅಧಿಕಾರ ತ್ಯಾಗ ಮಾಡಿದ ಹಲವು ಮಹನೀಯರು ಗೌರವದ ರಾಜಕಾರಣಕ್ಕೆ ಇತಿಹಾಸ ಬರೆದು ಹೋಗಿದ್ದಾರೆ. ಕರ್ನಾಟಕದ ರಾದಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ಸಂಪುಟ ಸದಸ್ಯ ಡಿಕೆ ಶಿವಕುಮಾರ್ ಅವರ ಮೇಲಿರುವ ಸಿಬಿಐ ತನಿಖೆಯ ಕೇಸ್ ಹಿಂತೆಗೆದುಕೊಳ್ಳುವ ನಿಲುವು ತಳೆದಿರುವುದು ಸಾಂವಿಧಾನಿಕ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮವಾಗಿದೆ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ
I will challenge the withdrawal of the Dissapropriation of Assets case against DK Shivakumar in the Court.
Government should reconsider withdrawl of Corruption Case.@ANI@PTI_Newshttps://t.co/xflu2XshCs
— Basanagouda R Patil (Yatnal) (@BasanagoudaBJP)November 24, 2023

ಮತ್ತೊಂದೆಡೆ ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯಾತ್ನಾಳ್, ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ಹಿಂಪಡೆದಿರುವುದನ್ನು ನಾನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಪರೋಕ್ಷವಾಗಿ ಒಪ್ಪಿಕೊಂಡ ಸಿದ್ದರಾಮಯ್ಯ ಸರ್ಕಾರಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಶುಕ್ರವಾರ ಹೇಳಿದ್ದಾರೆ.
By withdrawing approval for the CBI probe in the disproportionate assets case against Deputy Chief Minister@DKShivakumar, the CM@siddaramaiahgovernment has indirectly accepted that he is guilty of corruption.
CONgress that always lectures about democracy and morality should…
— C T Ravi 🇮🇳 ಸಿ ಟಿ ರವಿ (@CTRavi_BJP)November 24, 2023

ಏನಿದು ಪ್ರಕರಣ?ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧ 2019 ರಲ್ಲಿ ಸಿಬಿಐ ತನಿಖೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ಅನುಮತಿಯನ್ನು ನೀಡಿತ್ತು. ಆದರೆ ಈ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶಿವಕುಮಾರ್ ವಿರುದ್ಧ ತನಿಖೆಗೆ ಸಿಬಿಐಗೆ ನೀಡಲು ಹಿಂದಿನ ಸರ್ಕಾರ ನಿರ್ಣಯ ಕೈಗೊಂಡಿದ್ದ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಿಂದ ಒಪ್ಪಿಗೆಯನ್ನು ಪಡೆದುಕೊಳ್ಳಬೇಕಿತ್ತು. ಆದರೆ ಅದನ್ನು ಪಡೆಯದೇ ಶಿಫಾರಸು ಮಾಡಲಾಗಿತ್ತು. ಈ ಮೂಲಕ ಹಿಂದಿನ ಸರ್ಕಾರ ಕಾನೂನು ಬಾಹಿರ ನಿರ್ಧಾರ ಕೈಗೊಂಡಿದೆ ಎಂಬುವುದು ರಾಜ್ಯ ಸರ್ಕಾರದ ವಾದವಾಗಿದೆ.
ಸಿಬಿಐ ತನಿಖೆಗೆ ಬಿಎಸ್‌ವೈ ಸರ್ಕಾರ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ದೆಹಲಿಯ ವಿಶೇಷ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ 1946 ಅಡಿ ಸೆಕ್ಷನ್ 6 ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ವಿವಿಧ ಕಾಲಂಗಳ ಅಡಿಯಲ್ಲಿ 2020 ರಲ್ಲಿ ಸಿಬಿಐ ಡಿಕೆಶಿ ವಿರುದ್ಧ ಪ್ರಕರಣ ದಾಖಲು ಮಾಡಿತ್ತು.
ಭಾರತದಲ್ಲಿರುವ ರಾಯಭಾರ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿದ ಆಫ್ಘನ್‌; ಕಾರಣ ಬಹಿರಂಗ






ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 16 =
Remember me
