ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್​ ದುರಾಡಳಿತವನ್ನು ಜನರ ಮುಂದೆ ಇಡಲು ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿಯ ನೂತನ ವಿಪಕ್ಷ ನಾಯಕ ಆರ್​.ಅಶೋಕ​ ಹೇಳಿದರು.
ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಆಯ್ಕೆ ಎರಡೂ ವಿಚಾರವಾಗಿ ರಾಜ್ಯ ಬಿಜೆಪಿ ಕಳೆದ ಕೆಲವು ದಿನಗಳಿಂದ ತೀವ್ರ ವಾಗ್ದಾಳಿ ಎದುರಿಸಿದ್ದು, ಇತ್ತೀಚೆಗಷ್ಟೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದ ಬೆನ್ನಿಗೇ ಇದೀಗ ವಿಪಕ್ಷ ನಾಯಕರ ಆಯ್ಕೆ ಮಾಡಿದೆ. ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಆರ್​.ಅಶೋಕ​ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಆರ್​. ಅಶೋಕ​, ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ. ಯಾವುದೇ ವಿವಾದ ಇಲ್ಲದ ಆಡಳಿತವನ್ನು ನಾವು ಕೊಡುತ್ತೇವೆ. ವಿಜಯೇಂದ್ರ ಮತ್ತು ನಾನು ಇಬ್ಬರು ಜೋಡೆತ್ತಿನಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ದೇಶದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ವಿರುದ್ಧ ಹೋರಾಟ ಮಾಡಿ ನಾನು ಜೈಲು ಸೇರಿದ್ದೆ ಎಂದು ಹೋರಾಟದ ದಿನಗಳನ್ನು ನೆನೆದ ಅಶೋಕ್​, ನನ್ನನ್ನು ಆಯ್ಕೆ ಮಾಡಿದ ಪದ್ಮನಾಭನಗರದ ಜನತೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ​, ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ದಿವಾಳಿಯಾಗಿದೆ. ರೈತರ ಕಷ್ಟ ಕೇಳುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ. ಕಾಂಗ್ರೆಸ್​ ಸರ್ಕಾರ ರೈತರಿಗೆ ನಯಾ ಪೈಸೆ ಪರಿಹಾರ ಕೊಟ್ಟಿಲ್ಲ. ಕಾಂಗ್ರೆಸ್​ ಕೇವಲ ದ್ವೇಷ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್​ ದುರಾಡಳಿತವನ್ನು ಜನರ ಮುಂದೆ ಇಡಲು ಪ್ರಯತ್ನ ಮಾಡುತ್ತೇವೆ ಎಂದರು.
ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ವಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರಿಬ್ಬರ ಮಾರ್ಗದರ್ಶನದಲ್ಲಿ ನಾವು ಮುನ್ನಡೆಯುತ್ತೇವೆ. ಸಾಮಾನ್ಯ ಕಾರ್ಯಕರ್ತನಾಗಿ ಕಳೆದ 45 ವರ್ಷದಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.

ಅಂದಹಾಗೆ ಆರ್‌ ಅಶೋಕ ಅವರು ಬಿಜೆಪಿ ಹಿರಿಯ ನಾಯಕರಾಗಿದ್ದು, ಉಪ ಮುಖ್ಯಮಂತ್ರಿಯಾಗಿ ವಿವಿಧ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳಾದ ಬಳಿಕ ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರನ್ನೂ ಆಯ್ಕೆ ಮಾಡಿದೆ.
ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ; ಕೊನೆಗೂ ಆಯ್ತು ಮಹತ್ವದ ನಿರ್ಧಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 8 =
Remember me
