ಬೆಳಗಾವಿ/ಮಂಗಳೂರು/ಮೈಸೂರು:ಮುಂದಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಡಳಿತರೂಢ ಬಿಜೆಪಿಯು ಪಕ್ಷ ಸಂಘಟನೆ ಬಲರ್ವಧನೆ ಪ್ರವಾಸವನ್ನು ಮಂಗಳವಾರ ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತಋತ್ವದ ತಂಡ ಮಂಗಳೂರಿನಲ್ಲಿ, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದ ತಂಡ ಮಂಗಳೂರಿನಲ್ಲಿ, ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದ ತಂಡ ಮೈಸೂರಿನಲ್ಲಿ ಸರಣಿ ಸಭೆಗಳನ್ನು ನಡೆಸುವ ಮೂಲಕ ಮುಂದಿನ ಚುನಾವಣೆಗೆ ಕಾರ್ಯಕರ್ತರಲ್ಲಿ ಹುರುಪು ತುಂಬುತ್ತಿದೆ.
ಅಭಿವೃದ್ಧಿಯೇ ಚುನಾವಣಾ ವಿಷಯ:ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಆಧಾರದಲ್ಲಿ ಮುಂದಿನ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿ ಸಿದೆ. ಪಕ್ಷದ ಕಾರ್ಯಕರ್ತರು ಸರ್ಕಾರದ ಸಮಾಜಮುಖಿ ಕಾರ್ಯಕ್ರಮಗಳನ್ನು ಮತದಾರರ ಮುಂದಿಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ತಿಳಿಸಿದರು. ಪಕ್ಷದ ಪ್ರಮುಖರ ಸಭೆಯಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳ ಚರ್ಚೆ ನಡೆದಿದೆ. ಮೀನುಗಾರರರಿಗೆ ಹೆಚ್ಚಿನ ಸೌಲಭ್ಯ ಹಾಗೂ ವಿವಿಧ ಸಮುದಾಯಗಳಿಗೆ ನೆರವು ಒದಗಿಸುವ ಬಗ್ಗೆ ಪಕ್ಷದ ನಾಯಕರು ಸಲಹೆ ನೀಡಿದ್ದಾರೆ. ಪಕ್ಷ ಮತ್ತು ಸರ್ಕಾರ ಒಮ್ಮತದಿಂದ ಕೆಲಸ ಮಾಡುತ್ತಿದೆ ಎಂದರು.
ಪಕ್ಷ ಬಲಿಷ್ಠ:ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ವಿಭಾಗ ಮಟ್ಟದ ಬಿಜೆಪಿ ಪ್ರಮುಖರ ಸಭೆಯಲ್ಲಿ ರಾಜಕೀಯ ಸ್ಥಿತಿಗತಿಯ ಚರ್ಚೆ ನಡೆದಿದೆ. ಬೂತ್ ಸಮಿತಿ, ವಿವಿಧ ಮೋರ್ಚಾಗಳ ರಚನೆ ಸಹಿತ ಪಕ್ಷದ ಸಂಘಟನಾತ್ಮಕ ಗುರಿಯನ್ನು ಕರಾವಳಿಯಲ್ಲಿ ಬಹುತೇಕ ಸಾಧಿಸಲಾಗಿದೆ ಎಂದರು.
ಸಾಮಾನ್ಯ ಕಾರ್ಯಕರ್ತರ ಪರಿಶ್ರಮದಿಂದ ಬಲಿಷ್ಠವಾಗಿರುವ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ. ನಮ್ಮಲ್ಲಿ ಬಲಿಷ್ಠ, ಜನಪ್ರಿಯ ನಾಯಕರು ಇರುವುದರಿಂದ 4 ರಾಜ್ಯಗಳಲ್ಲಿ ಮರಳಿ ಅಧಿಕಾರ ಪಡೆದುಕೊಂಡಿದ್ದೇವೆ.
|ಅರುಣ್ ಸಿಂಗ್ರಾಜ್ಯ ಬಿಜೆಪಿ ಉಸ್ತುವಾರಿ
ಹೊಂದಾಣಿಕೆ ರಾಜಕಾರಣಕ್ಕೆ ಬ್ರೇಕ್ ಹಾಕಿ:ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕಾರಣ, ವೈಯಕ್ತಿಕ ಪ್ರತಿಷ್ಠೆ ತಕ್ಷಣ ನಿಲ್ಲಿಸಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮೊದಲು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಲಿ, ಮಾಜಿ ಶಾಸಕರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಸಂದೇಶ ರವಾನಿಸಿದರು. ಬಿಜೆಪಿ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕು. ಚುನಾವಣೆ ಸಂದರ್ಭದಲ್ಲಿ ಪಕ್ಷ ಯಾರನ್ನೇ ಅಭ್ಯರ್ಥಿಯನ್ನಾಗಿಸಿದರೂ ಅವರ ಗೆಲುವಿಗೆ ಶ್ರಮಿಸಬೇಕು. ವೈಯಕ್ತಿಕ ಪ್ರತಿಷ್ಠೆ ಹಾಗೂ ಹೊಂದಾಣಿಕೆ ರಾಜಕಾರಣ ನಿಲ್ಲಿಸದಿದ್ದರೆ ಪಕ್ಷ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.
150ಕ್ಕೂ ಹೆಚ್ಚು ಸ್ಥಾನದಲ್ಲಿ ಬಿಜೆಪಿ ಗೆಲುವು ನಿಶ್ಚಿತ:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅದ್ಬುತ ಸಾಧನೆ ಮಾಡಲಿದ್ದು, 150ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮೈಸೂರಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ವಿಭಾಗೀಯವಾರು ಸಂಘಟನೆ, ಸಮಾವೇಶದ ಬಳಿಕ ಏ.16 ಮತ್ತು 17ರಂದು ವಿಜಯನಗರ ಜಿಲ್ಲೆ ಹಂಪಿಯಲ್ಲಿ ರಾಜ್ಯ ಕಾರ್ಯ ಕಾರಿಣಿ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಸೇರಿ ಪ್ರಮುಖರು ಆಗಮಿಸಲಿದ್ದಾರೆ. ಈ ಸಭೆ ಯಲ್ಲಿ ಮುಂದಿನ ಚುನಾವಣೆಯ ರೂಪುರೇಷೆ, ನೀಲನಕ್ಷೆ ಅನಾವರಣಗೊಳ್ಳಲಿದೆ ಎಂದು ತಿಳಿಸಿದರು. ಎಲ್ಲ ಜಿಲ್ಲೆಗಳಿಗೂ ಅಲ್ಲಿಯ ವ್ಯವಸ್ಥೆಗೆ ಅನುಗುಣವಾಗಿ ಅರ್ಹರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ದೊರೆಯಲಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 11 =
Remember me
