ಬೆಂಗಳೂರು:ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆಯ ಪ್ರಯುಕ್ತ ಇರಿಸಲಾಗಿದ್ದ ಫೋಟೊವನ್ನು ಯಾಕೆ ಇಟ್ಟಿದ್ದೀರಿ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗ್ರವಾಲ್ ಪ್ರಶ್ನಿಸಿದ್ದು, ಈಗ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.
ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗ್ರವಾಲ್ ಅಸಹನೆಯಿಂದ ಸ್ವಾಮಿ ವಿವೇಕಾನಂದರ ಫೋಟೊ ಯಾಕೆ ಇಟ್ಟಿದ್ದೀರಿ? ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಬಿಜೆಪಿಯವರು ವಿವೇಕಾನಂದರನ್ನು ಬಳಸಿ ಬಿಸಾಡಲ್ಪಟ್ಟವರು ಎಂಬುದನ್ನು ಸಾಬೀತಾಗಿದೆ. ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಸ್ ವಿ. ಸದಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿ ಹಾಗೂ ಸಂಘ ಪರಿವಾರ ಭಾರತದಲ್ಲಿ ಬಲವಾಗಿ ಬೇರೂರಲು ಸ್ವಾಮಿ ವಿವೇಕಾನಂದರನ್ನು ದುರ್ಬಳಕೆ ಮಾಡಿಕೊಂಡು ಕಳೆದ 10 ವರ್ಷಗಳಿಂದ ಅಧಿಕಾರ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಭಾರತದ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಪಸರಿಸಿದ ಸ್ವಾಮಿ ವಿವೇಕಾನಂದರು ಹಾಕಿಕೊಟ್ಟಿರುವ ಧರ್ಮ ಮಾರ್ಗದಲ್ಲಿ ಎಂದೂ ಹೆಜ್ಜೆ ಇರಿಸದ ಬಿಜೆಪಿ, ಆರೆಸ್ಸೆಸ್ ನವರು ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಹೆಚ್ಚಿನ ಯುವಕರು ಸ್ವಾಮಿ ವಿವೇಕಾನಂದರ ಕಾರಣಕ್ಕಾಗಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆೆ. ಆದರೆ, ಬಿಜೆಪಿಯವರು ವಿವೇಕಾನಂದರ ಹೆಸರಲ್ಲಿ ಅಷ್ಟೂ ಯುವಕರನ್ನು ವಂಚಿಸಿದ್ದಾರೆ. ಹಿಂಸೆ, ದ್ವೇಷ, ವೈರತ್ವವವನ್ನೇ ತುಂಬಿಕೊಂಡಿರುವ ಬಿಜೆಪಿ, ಆರೆಸ್ಸೆಸ್‌ನವರು ಎಂದೂ ವಿವೇಕಾನಂದರ ಪಥದಲ್ಲಿ ಹೆಜ್ಜೆ ಇರಿಸಿಲ್ಲ ವಾಗ್ದಾಳಿ ನಡೆಸಿದರು.
ದೇವರು, ಧರ್ಮವನ್ನು ದುರ್ಬಳಕೆ ಮಾಡಿಕೊಂಡ ರೀತಿಯಲ್ಲೇ ಸ್ವಾಮಿ ವಿವೇಕಾನಂದರನ್ನು ದುರ್ಬಳಕೆ ಮಾಡಿಕೊಂಡರು. ಈ ಲೋಕಸಭೆ ಚುನಾವಣೆಯಲ್ಲಿ ರಾಮ ಮಂದಿರದ ಹೆಸರಲ್ಲಿ ರಾಜಕಾರಣ ಮಾಡಲು ಯತ್ನಿಸಿ ಸ್ವತಃ ಅಯೋಧ್ಯೆಯಲ್ಲೇ ಸೋತರು. ಈ ಕಾರಣಕ್ಕಾಗಿ ಬಿಜೆಪಿಯವರು ಶ್ರೀರಾಮನನ್ನೇ ನಿಂದಿಸುತ್ತಿದ್ದಾರೆ. ಜನತೆ ಇಂತಹ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮೊದಲು ಭಗತ್ ಸಿಂಗ್ ಹೆಸರನ್ನು ಎತ್ತುತ್ತಿದ್ದರು. ಕ್ರಮೇಣ ಭಗತ್ ಸಿಂಗ್ ಅವರ ಬದುಕಿನ ಹೋರಾಟಕ್ಕೂ ತಮ್ಮ ಹೇರಿಕೆಯ ಹಿಂದುತ್ವದ ಸಿದ್ಧಾಂತಕ್ಕೂ ಸರಿ ಹೊಂದದ ಕಾರಣ ಭಗತ್ ಸಿಂಗ್ ಅವರನ್ನು ಕೈಬಿಟ್ಟರು ಎಂದು ಬೇಸರ ವ್ಯಕ್ತಪಡಿಸಿದರು.ಸ್ವಾಮಿ ವಿವೇಕಾನಂದರ ಬದುಕಿಗೂ ಬಿಜೆಪಿಗರ ಹಿಂದುತ್ವದ ಸಿದ್ಧಾಂತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹಾಗಾಗಿ ಅವರ ಹಾದಿಯನ್ನು ಎಂದೂ ತುಳಿಯದ ಬಿಜೆಪಿಗರು ಸದ್ಯ ಸ್ವಾಮಿ ವಿವೇಕಾನಂದರ ಹೆಸರನ್ನೇ ಹೇಳುತ್ತಿಲ್ಲ. ಬಿಜೆಪಿಗೆ ವಿವೇಕಾನಂದರ ಬಗ್ಗೆ ನಿಜಕ್ಕೂ ಗೌರವವಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
