ಬೆಂಗಳೂರು:ರಾಜ್ಯ ವಿಧಾನ ಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಎರಡು ಹೊಸಮುಖಗಳಿಗೆ ಮನ್ನಣೆ ನೀಡಲು ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೆ.ಸಿ. ರಾಮಮೂರ್ತಿ ಅವರು ಮತ್ತೊಂದು ಅವಧಿಗೆ ಆಯ್ಕೆ ಆಗಲು ಟಿಕೆಟ್ ಬಯಸಿದ್ದರು. ಆದರೆ ರಾಜ್ಯದಿಂದ ಅವರನ್ನು ಆಯ್ಕೆ ಮಾಡುತ್ತಿಲ್ಲ ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾಗಿ ಉನ್ನತ ಮೂಲಗಳು ಖಚಿತಪಡಿಸಿವೆ. ನಿರ್ಮಲಾ ಸೀತಾರಾಮನ್ ಅವರನ್ನು ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಕಳುಹಿಸಲಾಗುತ್ತದೆ ಎಂದು ಹೇಳಲಾಗಿದೆ.
ಯಾರಿಗೆ ಅವಕಾಶ?:ಪಕ್ಷದ ಉಪಾಧ್ಯಕ್ಷರಾದ ನಿರ್ಮಲ ಕುಮಾರ್ ಸುರಾನ ಹಾಗೂ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ ಅವರಿಗೆ ರಾಜ್ಯಸಭೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸುರಾನ ಅವರು ಒಂದು ಅವಧಿಗೆ ಶಾಸಕರಾಗಿದ್ದರು. ಆ ನಂತರ ಪ್ರತಿ ಚುನಾವಣೆಯಲ್ಲಿ ಅವರ ಹೆಸರು ಶಿಫಾರಸು ಆಗುತ್ತಿತ್ತು. ಆದರೆ ಹೈಕಮಾಂಡ್ ಪರಿಗಣಿಸಿರಲಿಲ್ಲ. ಆದರೆ ಈ ಬಾರಿ ಪರಿಗಣಿಸಲಿದೆ ಎಂದು ಮೂಲಗಳು ಹೇಳಿವೆ.
ಬಿಬಿಎಂಪಿ ಸದಸ್ಯರಾಗಿದ್ದ ಗೀತಾ ವಿವೇಕಾನಂದ ಅವರು ಇತ್ತೀಚೆಗೆ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ನೇಮಕವಾಗಿದ್ದರು. ಸುರಾನ ಹಾಗೂ ಗೀತಾ ಅವರಿಬ್ಬರು ಸಹ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಆಪ್ತರಾಗಿದ್ದಾರೆ.
ಅಚ್ಚರಿಯ ಆಯ್ಕೆ:ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ಇನ್ನೂ ಚರ್ಚೆ ನಡೆಸಿಲ್ಲ. ರಾಜ್ಯ ಕೋರ್ ಕಮಿಟಿಯಿಂದ 30ಕ್ಕೂ ಹೆಚ್ಚು ಹೆಸರು ಶಿಫಾರಸು ಆಗಿವೆ. ಸಂಘ ಪರಿವಾರದಿಂದಲೂ ಒಂದು ಪಟ್ಟಿ ಹೈಕಮಾಂಡ್​ಗೆ ರವಾನೆಯಾಗಿದೆ ಎಂದು ಹೇಳಲಾಗುತ್ತದೆ. ಹೀಗಾಗಿ ಅಚ್ಚರಿಯ ಆಯ್ಕೆ ಹೊರಬೀಳುವ ಸಾಧ್ಯತೆ ಇದೆ.
ಲೋಕಸಭೆಗೆ ರಾಮಮೂರ್ತಿ:ಈಗ ಅವಧಿ ಪೂರ್ಣವಾಗುತ್ತಿರುವ ಕೆ.ಸಿ. ರಾಮಮೂರ್ತಿ ಅವರಿಗೆ ಮತ್ತೊಂದ ಅವಧಿಗೆ ಟಿಕೆಟ್ ನೀಡಲಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಅವರನ್ನು ಬೆಂಗಳೂರು ಉತ್ತರ ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ವರಿಷ್ಠರು ಆಸಕ್ತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯದವರಿಗೆ ಆದ್ಯತೆ:ಈ ಹಿಂದೆ ವೆಂಕಯ್ಯ ನಾಯ್ಡು ಅವರಿಗೆ ನಾಲ್ಕನೇ ಅವಧಿಗೆ ಅವಕಾಶ ಕಲ್ಪಿಸಲು ಬಿಜೆಪಿ ಮುಂದಾದಾಗ ರಾಜ್ಯದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ‘ವೆಂಕಯ್ಯ ಸಾಕಯ್ಯ’ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿ ವರಿಷ್ಠರು ಮುಜುಗರಕ್ಕೆ ಒಳಗಾಗಿದ್ದರು. ನಿರ್ಮಲಾ ಸೀತಾರಾಮನ್ ಅವರ ಬಗ್ಗೆಯೂ ರಾಜ್ಯಕ್ಕೆ ಅವರ ಕೊಡುಗೆ ಏನು? ಎಂಬ ಪ್ರಶ್ನೆಗಳು ಕೇಳಿ ಬರಲಾರಂಭಿಸಿವೆ. ಹೀಗಾಗಿ ಇಬ್ಬರು ರಾಜ್ಯದವರನ್ನೇ ಆಯ್ಕೆ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳುತ್ತವೆ.
ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕೆಳಕ್ಕೆ ಬಿದ್ದ ಪ್ರೇಮಿಗಳು; ಯುವತಿ ಸಾವು, ಯುವಕ ಬಚಾವ್!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:thirteen − three =
Remember me
