
ಬೆಂಗಳೂರು:ಬೆಂಗಳೂರು ಅಭಿವೃದ್ಧಿಯನ್ನು ನಿರ್ಲಕ್ಷಿಸಿರುವ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಸ್ವಾತಂತ್ರ್ಯ ಉದ್ಯಾನವನದ ಬಳಿ ಬೃಹತ್ ಪ್ರತಿಭಟನೆ ನಡೆಸಿತು.ಬ್ರ್ಯಾಂಡ್ ಬೆಂಗಳೂರು ಬದಲು ಬೆಂಗಳೂರು ಗುಂಡಿಗಳ ನಗರವಾಗಿದೆ, ಕ್ರೈಂ ಸಿಟಿಯಾಗಿದೆ ಎಂದು ಎದ್ದೇಳು ಬೆಂಗಳೂರು ಭಿತ್ತಿಪತ್ರವನ್ನು ಹಿಡಿದ ಪ್ರತಿಭಟನಾಕಾರರು ೋಷಣೆಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬ್ರ್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾಕ್ ಥರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿ ವರ್ಷವಾದರೂ ಒಂದು ರೂಪಾಯಿ ಹಣವನ್ನು ಬೆಂಗಳೂರು ಅಭಿವೃದ್ಧಿಗೆ ಬಿಡುಗಡೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.ರಾಜ್ಯದ ಒಟ್ಟು ತೆರಿಗೆಯಲ್ಲಿ ಶೇ.60 ರಿಂದ 65 ತೆರಿಗೆ ಬೆಂಗಳೂರಿಂದ ಸಂಗ್ರಹವಾಗುತ್ತಿದ್ದರೂ ಅದನ್ನು ಇಲ್ಲಿನ ಪ್ರಗತಿಗೆ ಆದ್ಯತೆ ನೀಡಿಲ್ಲ. ಬದಲಿಗೆ ಸಿಎಂ, ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದರು. ಈಗ ಬೆಂಗಳೂರಿನ ಜನರೂ ಕುಡ ಬೆಂಗಳೂರಿನ ತೆರಿಗೆ ಬೆಂಗಳೂರಿಗರ ಹಕ್ಕು ಎಂದು ಹೋರಾಟ ಮಾಡಲು ಸಿದ್ಧರಾಗಬೇಕು ಎಂದು ಕರೆ ನೀಡಿದರು.ಮಳೆಗಾಲ ಆರಂಭವಾಗುವಾಗಲೇ ರಸ್ತೆಗಳು ಹೊಂಡ ಗುಂಡಿಯಿಂದ ಕೂಡಿದೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಕಸ ಎತ್ತುವವರಿಗೆ ಜನವರಿಯಿಂದ ಸಂಬಳ ಕೊಟ್ಟಿಲ್ಲ. ಸಿಎಂ ಮೊನ್ನೆ ಒಣಗಿದ ಮರ ತೆಗೆಸಲು ಸೂಚಿಸಿದ್ದರೂ ಒಂದಾದರೂ ಮರ ತೆಗೆಯಲಿಲ್ಲ. ತೆಗೆದಿದ್ದರೆ ಸಾಕ್ಷಿ ತೋರಿಸಿ ಎಂದು ಸವಾಲೆಸೆದರು.ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತನಾಡಿ, ಬೆಂಗಳೂರಿನಲ್ಲಿ ಬೀದಿ ರಂಪಾಟಗಳು ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು, ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ. ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದರು.ರಸ್ತೆಗಳು ಹೊಂಡಮಯವಾಗಿದ್ದು ಅಪಘಾತಗಳು ಹೆಚ್ಚುತ್ತಿದ್ದು, ಅಮಾಯಕರು ಎಲ್ಲೆಂದರಲ್ಲಿ ಸಾಯುವಂತಾಗಿದೆ ಎಂದರು.ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಂತಿದೆ. ಸಿಎಂ ಮತ್ತು ಡಿಸಿಎಂ ಹಾಗೂ ಸಚಿವರಿಂದಾಗಿ ಎಲ್ಲ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ದೂರಿದರು.ತಕ್ಷಣ ರಸ್ತೆಯಲ್ಲಿರುವ ಗುಂಡಿ ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದ ಅವರು, ಕಾಂಗ್ರೆಸ್ ಸರ್ಕಾರ ಸರಿದಾರಿಗೆ ಬರದಿದ್ದರೆ ಅದನ್ನು ಸರಿದಾರಿಗೆ ತರುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದರು.ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮಾತನಾಡಿ, ಸರ್ಕಾರಕ್ಕೆ ಈ ಪ್ರತಿಭಟನೆ ಎಚ್ಚರಿಕೆ ಗಂಟೆ. ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.ಆಶಾದಾಯಕ, ಭರವಸೆದಾಯಕ ನಗರ ಬೆಂಗಳೂರನ್ನು ಕಾಂಗ್ರೆಸ್ ಸರಕಾರ ಕಡೆಗಣಿಸಿದೆ. ಇಂತ ಕೆಟ್ಟ- ಭ್ರಷ್ಟ ಸರ್ಕಾರವನ್ನು ಮೊದಲು ತೊಲಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಮಾಜಿ ಸಚಿವರಾದ ಬೈರತಿ ಬಸವರಾಜ್, ಕೆ.ಗೋಪಾಲಯ್ಯ, ಮುನಿರತ್ನ, ನಾರಾಯಣಗೌಡ, ಶಾಸಕರಾದ ಎಸ್.ಆರ್.ವಿಶ್ವನಾಥ್, ಮುನಿರಾಜು, ರವಿಸುಬ್ರಹ್ಮಣ್ಯ, ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಬೆಂಗಳೂರಿನ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
