
ಬೆಂಗಳೂರು:ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಪ್ರತಿಭಟಿಸಿ ಬಿಜೆಪಿ ಕಚೇರಿಯಿಂದ ವಿಧಾನಸೌಧಕ್ಕೆ ಹೊರಟ ಬಿಜೆಪಿ ಸೈಕಲ್ ಜಾಥಾವನ್ನು ಮಧ್ಯದಲ್ಲಿಯೇ ತಡೆದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.ಬಿಜೆಪಿ ಕಚೇರಿ ಬಳಿಯಿಂದಲೇ ಸೈಕಲ್ ಜಾಥಾ ಹೊರಡಲಿ ಎನ್ನುವ ಹಿನ್ನೆಲೆಯಲ್ಲಿ ಮೊದಲೇ ನಾಕಾಬಂದಿ ಹಾಕುವ ಮೂಲಕ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬೆಲೆ ಏರಿಕೆ ಮತ್ತು ಸರ್ಕಾರದ ವಿರುದ್ದ ೋಷಣೆ ಕೂಗುತ್ತಾ ಸೈಕಲ್ ಜಾಥಾ ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ಸ್ವಲ್ಪ ದೂರದಲ್ಲಿಯೇ ತಡೆದರು. ಪೊಲೀಸ್ ಕೋಟೆ ಭೇದಿಸಿ ಮುನ್ನುಗ್ಗುವ ಪ್ರಯತ್ನವನ್ನು ವಿಲಗೊಳಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದು ಬಳಿಕ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,ಬೆಲೆ ಏರಿಕೆ ಖಂಡಿಸಿ ಇವತ್ತು ರಾಜ್ಯದಾದ್ಯಂತ ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಸೈಕಲ್ ಜಾಥಾ ಮೂಲಕ ಸರಕಾರವನ್ನು ಎಚ್ಚರಿಸುವ ಕೆಲಸ ನಡೆಯುತ್ತಿದೆ ಎಂದರು.ರೈತರು ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಮೇಲೆ ಹೊರೆಯಾಗಿದೆ. ಇದು ಅಕ್ಷಮ್ಯ ಅಪರಾಧ ಮತ್ತು ಖಂಡನೀಯ. ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಮತ್ತು ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಬಗ್ಗೆ ಸಚಿವರು ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಕೆಯ ನಿರ್ಧಾರ ರಾಜ್ಯದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದರು.ರಸ್ತೆ ತಡೆ ಮಾಡಿದರೆ, ಲಾಠಿ ಚಾರ್ಜ್ ಮಾಡುವುದಾಗಿ ಗೃಹ ಸಚಿವರು ಹೇಳಿರುವುದು ಖಂಡನೀಯ. ಮೂರ್ಖತನದ ಪರಮಾವಧಿ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದರು.ಬಿಜೆಪಿ ಕಾರ್ಯಕರ್ತರು ಲಾಠಿಗೆ, ದೌರ್ಜನ್ಯಕ್ಕೆ ಹೆದರುವುದಿಲ್ಲ. ಜನರು, ರೈತರು, ಬಡವರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮಾಡುವವರ ವಿರುದ್ಧ ಲಾಠಿ ಪ್ರಹಾರ ಮಾಡುವುದಾದರೆ ಇದು ದರ್ಪದ ಕ್ರಮ. ಅಧಿಕಾರದ ಅಹಂನಿಂದ ಈ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
*ಬೆಲೆ ಏರಿಕೆ ವಿರುದ್ದ ಜನರ ಧ್ವನಿಯಾಗಿ ಹೋರಾಟ ಮಾಡುತ್ತಿದ್ದ ಬಿಜೆಪಿ ಸೈಕಲ್ ಜಾಥಾವನ್ನು ತಡೆದು ಬಂಧಿಸಿರುವ ಸರ್ಕಾರದ ಕ್ರಮ ಖಂಡನೀಯ. ಇದು ಅಧಿಕಾರದ ಅಮಲಿನಲ್ಲಿರುವ ದರ್ಪದ ಡೋಂಗಿ ಸರ್ಕಾರ. ಇದಕ್ಕೆಲ್ಲ ನಾವು ಹೆದರುವುದಿಲ್ಲ. ಹೋರಾಟ ಮುಂದುವರಿಸುತ್ತೇವೆ.-ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 1 =
Remember me
