
ಬೆಂಗಳೂರು:ಕಾಂಗ್ರೆಸ್ ಸರ್ಕಾರದಲ್ಲ್ಲಿ ದಿನ ನಿತ್ಯ ಬೆಲೆ ಹೆಚ್ಚಳ ಮಾಡುವ ಪರ್ವ ಶುರುವಾಗಿದ್ದು, ಜನಸಾಮಾನ್ಯರ ಬದುಕು ಸಂಕಷ್ಟದಲ್ಲಿ ಸಿಲುಕಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಟೀಕಿಸಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸರಕಾರವು ಕಣ್ಣಿದ್ದೂ ಕುರುಡಾಗಿದೆ. ಕಿವಿ ಇದ್ದರೂ ಕಿವುಡಾಗಿದೆ. ತಲೆ ಇದ್ದರೂ ಬುದ್ಧಿ ಭ್ರಮಣೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.ಸರ್ಕಾರದ ನೀತಿ, ನಿರ್ಧಾರ ಹಾಗೂ ಚಟುವಟಿಕೆಗಳನ್ನು ನೋಡಿದರೆ ಈ ಸರಕಾರಕ್ಕೆ ಮನುಷ್ಯತ್ವ ಇಲ್ಲವಾಗಿದೆ. ಡೆಂಗ್ಯೂ ಮನೆ ಮನೆಗೆ ಹಬ್ಬುತ್ತಿದ್ದರೂ, ನಿಯಂತ್ರಣಕ್ಕೆ ಕ್ರಮ ತೆಗೆದುಕೊಂಡಿಲ್ಲ. ಸರಿಯಾದ ಚಿಕಿತ್ಸೆ ಲಭಿಸುತ್ತಿಲ್ಲ. ವೈದ್ಯರು, ಔಷಧಿಯ ಲಭ್ಯತೆ ಇಲ್ಲ. ವೈದ್ಯಕೀಯ ಸಚಿವರು, ಆರೋಗ್ಯ ಸಚಿವರು ಎಲ್ಲಿ ಹೋಗಿದ್ದಾರೆ ಎಂದು ಹುಡುಕಬೇಕಾಗಿದೆ ಎಂದರು.ಪಿಯುಸಿ, ಎಸ್ಸೆಸ್ಸೆಲ್ಸಿ, ಎಂಜಿನಿಯರಿಂಗ್, ವೈದ್ಯಕೀಯ ಸೇರಿ ಎಲ್ಲ ವಿದ್ಯಾರ್ಥಿಗಳ ಶುಲ್ಕ ಹೆಚ್ಚು ಮಾಡುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾರಣ ಬೆಲೆ ಬಿಸಿ ಏರಿಕೆ ಎಲ್ಲ ವರ್ಗದ ಜನರ ಮೇಲೆ ಪರಿಣಾಮ ಬೀರಿದೆ ಎಂದರು.
ಡಿಸಿಗೆ ಹಾಲು ನೀಡಿ ಪ್ರತಿಭಟನೆಬೆಲೆ ಏರಿಕೆ ವಿರೋಧಿಸಿ ರಾಜ್ಯದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಸು ಕರೆದುಕೊಂಡು ಬಂದು ಹಾಲು ಕರೆದು ಜಿಲ್ಲಾಧಿಕಾರಿಗಳಿಗೆ ನೀಡುವ ಮೂಲಕ ರಾಜ್ಯ ರೈತ ಮೋರ್ಚಾ ಘಟಕಗಳ ವತಿಯಿಂದ ವಿಭಿನ್ನ ಮಾದರಿಯ ಪ್ರತಿಭಟನೆ ಮಾಡಲಿದ್ದೇವೆ ಎಂದರು.ಹಾಲಿನ ಬೆಲೆ ಹೆಚ್ಚಳ ಮಾಡಿರುವುದು ಮನೆಮುರುಕ ನಿರ್ಣಯವಾಗಿದೆ. ಹಾಲಿನ ದರ ಹೆಚ್ಚಳಕ್ಕೆ ಪ್ಯಾಕೆಟ್‌ಗೆ 50 ಎಂಎಲ್ ಹೆಚ್ಚು ಹಾಲು ಕೊಡಲಾಗುತ್ತಿದೆ ಎಂದು ಹೇಳಿ ವಂಚನೆ ಮಾಡಲಾಗುತ್ತಿದೆ. 50 ಎಂಎಲ್ ಹೆಚ್ಚು ಮಾಡಬೇಕೆಂದು ನಿಮ್ಮನ್ನು ಯಾರು ಕೇಳಿದ್ದಾರೆ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು.
ಜನರ ಜೊತೆ ಚೆಲ್ಲಾಟಮಾನವ ಜೀವನದ ಮೇಲೆ ಈ ಸರ್ಕಾರ ಚೆಲ್ಲಾಟವಾಡುತ್ತಿದೆ. ಟ್ರಾನ್ಸ್‌ಪೋರ್ಟ್ ಇಲ್ಲದೆ ಜೀವನ ನಡೆಯುವುದಿಲ್ಲ. ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯಿಂದ ಜೀವನದ ಮೇಲೆ ತೀವ್ರ ದುಷ್ಪರಿಣಾಮ ಆಗಿದೆ. ಈ ಸರ್ಕಾರ ದೀನ ದಲಿತರ ಪರ ಇಲ್ಲ. ಹಿಂದುಳಿದವರ ಪರ ಇಲ್ಲದ, ಸಾಮಾನ್ಯ ಜನರ ಪರ ಇಲ್ಲದ ಸರಕಾರ ಇದೆಂದು ದೂರಿದರು.
ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆಹಾಲಿನ ದರ ಏರಿಕೆಯಿಂದ ಟೀ, ಕಾಫಿ ಬೆಲೆ ಹೆಚ್ಚಾಗಲಿದೆ. ಹೋಟೆಲ್ಗಳ ತಿಂಡಿಗಳ ದರ ಹೆಚ್ಚಳ ಆಗಲಿದೆ. ಇದರ ಪರಿಣಾಮ ಮತ್ತಷ್ಟು ಜನರ ಮೇಲೆ ಆಗಲಿದೆ. ಎಮ್ಮೆಗೆ ಜ್ವರ ಬಂದರೆ ಎತ್ತಿಗೆ ಬರೆ ಹಾಕಿದಂತೆ, ಈ ಸರ್ಕಾರಕ್ಕೆ ಜ್ವರ ಬಂದರೆ ಜನತೆಗೆ ಬರೆ ಹಾಕುತ್ತಾರೆ ಎಂದು ಟೀಕಿಸಿದರು.ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಹನುಮಂತ್ ನಿರಾಣಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ರುದ್ರೇಶ್, ಭಾರತಿ ಮಲ್ಲಿಕಾರ್ಜುನ್, ಬ್ಯಾಡರಂಗೇಗೌಡ ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + two =
Remember me
