ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಹಾಗೂ ರೈತ ವಿರೋಧಿ ನಡೆಯನ್ನು ಖಂಡಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಾರಥ್ಯದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೇಸರಿ ಪಡೆ ಬೃಹತ್ ಹೋರಾಟ ನಡೆಸುತ್ತಿದೆ.
ನೂರು ದಿನಗಳನ್ನು ಸಂಭ್ರಮಿಸುತ್ತಿರುವ ಸರ್ಕಾರ ಬರಗಾಲವನ್ನು ಮರೆತಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರಾಜ್ಯಕ್ಕೆ ದ್ರೋಹ ಬಗೆದಿದೆ. ರೈತರ ಸಂಕಷ್ಟ, ಕುಡಿಯುವ ನೀರಿನ ಬವಣೆ ನಿರ್ಲಕ್ಷಿಸಿ, ಗ್ಯಾರಂಟಿಗಳ ಜಾತ್ರೆ, ದುಂದು ವೆಚ್ಚ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಹಿಮಾಚಲ ದುರಂತಕ್ಕೆ ಮಾಂಸಾಹಾರವೇ ಕಾರಣ..?, ಗದ್ದಲ ಸೃಷ್ಟಿಸಿದ ಐಐಟಿ ನಿರ್ದೇಶಕ ಪ್ರೊ.ಲಕ್ಷ್ಮೀಧರ್ ಹೇಳಿಕೆ
ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿದೆ. ಬ್ರ್ಯಾಂಡ್ ಹೆಸರಿನಲ್ಲಿ ಬರೀ ಸುತ್ತಾಟ ಮಾಡುತ್ತಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಮಂಜೂರಾದ ಕಾಮಗಾರಿಗಳು ನಡೆಯುತ್ತಿವೆ. ಆದರೆ, ಹೊಸ ಕಾಮಗಾರಿ ನಡೆಯುತ್ತಿಲ್ಲ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಮುಖಂಡರು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದರು.
ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ‌, ಡಿ.ವಿ.ಸದಾನಂದ ಗೌಡ, ಮಾಜಿ ಸಚಿವರಾದ ಆರ್.ಅಶೋಕ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಮುನಿರತ್ನ, ಗೋವಿಂದ ಕಾರಜೋಳ, ಬೈರತಿ ಬಸವರಾಜ, ಸಂಸದ, ಶಾಸಕರು, ಮುಖಂಡರು, ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಹಿಂದು ಧರ್ಮಕ್ಕೆ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ: ಉದಯನಿಧಿ​ಗೆ ಪ್ರತಾಪ್​ ಸಿಂಹ ಟಾಂಗ್​

ಡಿಜಿಟಲ್ ಕ್ರಾಂತಿಯ ಮೂಲಕ ಕೃಷಿಯಲ್ಲಿ ಪರಿವರ್ತನೆ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ಚಂದ್ರನಲ್ಲಿ ಎಕರೆಗಟ್ಟಲೆ ಜಮೀನು ಖರೀದಿಸಿ ಪತ್ನಿಗೆ ಉಡುಗೊರೆ ನೀಡಿದ ಪತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − six =
Remember me
