ಬೆಂಗಳೂರು:ಗೋಹತ್ಯೆ ನಿಷೇಧ ಕಾಯ್ದೆ ವಾಪಸ್​ ಪಡೆಯುವ ನಿರ್ಧಾರ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಿರುವ ಕ್ರಮವನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಯುತ್ತಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಅವರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.
ಪ್ರತಿಭಟನೆಯ ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಸಿದ್ಧರಾಮಯ್ಯ ಅವರು ಹೇಳಿದ್ದರು. ಆದರೆ, ಈಗ ಎಲ್ಲ ಉಲ್ಟಾ ಆಗಿದೆ. ಯಾವುದೇ ಷರತ್ತುಗಳು ಇಲ್ಲದೆ ಮೊದಲ ಕ್ಯಾಬಿನೆಟ್‌ನಲ್ಲೇ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ, ಈಗ ಭಂಡತನ ಪ್ರದರ್ಶನ ಮಾಡುತ್ತಿದ್ದಾರೆ. ಎಲ್ಲ ಗ್ಯಾರಂಟಿಗಳಿಗೂ ಷರತ್ತುಗಳು ಹೇರುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳುವ ಪ್ರಶ್ನೆಗೆ ಹಾರಿಕೆ ಉತ್ತರ ನೀಡುತ್ತಾರೆ‌ ಎಂದು ಕಿಡಿಕಾರಿದ್ದಾರೆ.
ಪ್ರತಿಭಟನೆಯ ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸರ್ಕಾರ ಜನರಿಂದ ನಡೆಯುವುದೇ ಹೊರತು ಸರ್ಕಾರದಿಂದ ಜನ ಅಲ್ಲ. ಇದನ್ನು ಸಿಎಂ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಅಂಬೇಡ್ಕರ್ ಕೂಡ 370 ಆರ್ಟಿಕಲ್ ವಿರೋಧಿಸಿದರು. ಆದರೆ, ನೀವು ನಿಮ್ಮ ಅನುಕೂಲಕ್ಕಾಗಿ ಅದನ್ನು ಜಾರಿಯಲ್ಲಿಟ್ಟಿದ್ರಿ. ಈಗ ಹಸುವನ್ನು ಕಸಾಯಿಖಾನೆಗೆ ಕಳುಹಿಸುತ್ತೀರಾ? ಹಸು ಅಂದರೆ ತಾಯಿ. ಹಸುವನ್ನು ಮಾತ್ರ ತಾಯಿ ಅಂತಾರೆ. ತಾಯಿಗೆ ವಯಸ್ಸಾಯ್ತು ಅಂತ ಸಾಯಿಸುತ್ತೀರಾ? ಇಂತಹ ಕಾಯಿದೆಗಳನ್ನು ಮಾಡಬಾರದು ಎಂದ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.
ಪ್ರತಿಭಟನೆಯ ವೇದಿಕೆಯಲ್ಲಿ ಡಾ.ಸಿ. ಎನ್.ಅಶ್ವತ್ಥ್‌ನಾರಾಯಣ್ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರ್ಕಾರ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿ‌ ಮಾಡುತ್ತೇವೆ ಎಂದಿದ್ದರು. ಆದರೆ, ಅದು ಆಗಲಿಲ್ಲ. ಮೊದಲು ಗ್ಯಾರಂಟಿಗಳ ಜಾರಿ ಮಾಡಲಿಲ್ಲ. ಅದರ ಬದಲು ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ 200 ಯೂನಿಟ್ ಉಚಿತ ಎಂದಿದ್ರು‌. ಆದರೆ, ಪ್ರತಿ ಯುನಿಟ್‌ಗೆ 65 ಪೈಸೆ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗಳ ಜಾರಿಗೆ ತರದೇ, ಬೆಲೆ ಏರಿಕೆ ಮಾಡುತ್ತಿದ್ದಾರೆ. ಇದಕ್ಕೆ ನನ್ನ ಧಿಕ್ಕಾರ ಎಂದರು.(ದಿಗ್ವಿಜಯ ನ್ಯೂಸ್​)
ಉಚಿತ ವಿದ್ಯುತ್ ಬಾಡಿಗೆದಾರರಿಗೂ ಅನ್ವಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಭಾರತೀಯ ಚಿತ್ರರಂಗ ಇತಿಹಾಸದಲ್ಲಿ ದಾಖಲೆ ಬರೆದ ಆದಿಪುರುಷ್​ ಚಿತ್ರದ​ ಪ್ರೀ ರಿಲೀಸ್​ ಇವೆಂಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
