ಶಿವಮೊಗ್ಗ:ವಿನಾಯಕ ದಾಮೋದರ್ ಸಾವರ್ಕರ್ ಅವರ ಭಾವಚಿತ್ರಕ್ಕೆ ವಿರುದ್ಧವಾಗಿ ಆಕ್ರೋಶ ವ್ಯಕ್ತಪಡಿಸಿದ್ದ ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ವರದಿಯಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರಂಭದ ಪ್ರಯುಕ್ತ ಶಿವಮೊಗ್ಗ ಸಿಟಿ ಸೆಂಟರ್ ಮಾಲ್​ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, ಆತನ ಫೋಟೋ ತೆಗೆಯಿರಿ ಎಂದು ಪಟ್ಟು ಹಿಡಿದಿದ್ದರು.
ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಎದುರು ಪ್ರತಿಭಟನೆ ನಡೆಸಿ, ಎಸ್​ಡಿಪಿಐ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯಿಂದಲೇ ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಪ್ರದರ್ಶನ ಆಯೋಜಿಸಲಾಗಿತ್ತು. ಅದಾಗ್ಯೂ ಸಾವರ್ಕರ್ ಫೋಟೋ ವಿರುದ್ಧ ತಕರಾರು ತೆಗೆದ ಎಸ್​​ಡಿಪಿಐ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಮಾತ್ರವಲ್ಲ, ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.
ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರ ಆಕ್ರೋಶ!
ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಎಬಿವಿಪಿ ಧ್ವಜ; ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + seventeen =
Remember me
