
ಬೆಂಗಳೂರು:ಸಾರ್ವಜನಿಕ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಮುಖ ವಿಷಯಗಳನ್ನು ಪ್ರತಿಭಟನೆ ಮೂಲಕವೇ ಸರ್ಕಾರದ ಗಮನಕ್ಕೆ ತರಲು ಬಿಜೆಪಿ ನಿರ್ಧರಿಸಿದೆ.ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧ್ಯಕ್ಷರಾದ ಮೇಲೆ ಒಂದಷ್ಟು ಬದಲಾವಣೆಗಳನ್ನು ತರಲಾಗುತ್ತಿದ್ದು, ಕೇವಲ ಟೀಕೆ ಟಿಪ್ಪಣಿ ಮೂಲಕವೇ ಪ್ರತ್ಯುತ್ತರ ನೀಡವ ಬದಲು, ಪ್ರತಿಭಟನೆ ಸ್ವರೂಪದಲ್ಲಿ ಸರ್ಕಾರದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ.ಲೋಕಸಭೆ ಚುನಾವಣೆಯೂ ಹತ್ತಿರ ಬರುತ್ತಿರುವ ಹೊತ್ತಿನಲ್ಲಿ ಬಿಜೆಪಿಯ ಸಂಘಟನೆಗೆ ಇನ್ನಷ್ಟು ಕ್ರೀಯಾಶೀಲತೆ ತರಬೇಕಾಗಿರುವ ಅನಿವಾರ್ಯತೆ ಇದೆ. ಆದ್ದರಿಂದ ಈ ನಿಟ್ಟಿನಲ್ಲಿ ಹೋರಾಟ, ಪ್ರತಿಭಟನೆಯೂ ಪ್ರಮುಖ ಅಸವಾಗಿದೆ ಎಂದು ಚರ್ಚಿಸಲಾಗಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೋರಾಟದ ಮೂಲಕವೇ ರಾಜ್ಯದಲ್ಲಿ ಬಿಜೆಪಿ ನೆಲೆಯನ್ನು ಗಟ್ಟಿಯಾಗಿ ವಿಸ್ತರಿಸಿರುವ ಉದಾಹರಣೆ ಇದೆ. ಕಳೆದ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ ಹೋರಾಟದ ಮೊನಚನ್ನು ಕಳೆದುಕೊಂಡಿದೆ. ಆದ್ದರಿಂದ ಹೋರಾಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬಿಜೆಪಿ ಅಧ್ಯಕ್ಷರಿಗೆ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಹೋರಾಟ ಮತ್ತು ಪ್ರತಿಭಟನೆಯ ಕಾವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.ತಾಲೂಕು ಮತ್ತು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ನಡೆಯುವ ಹೋರಾಟದಲ್ಲಿ ಅಲ್ಲಿನ ಮುಖಂಡರು, ಕಾರ್ಯಕರ್ತರು ಭಾಗಿಯಾಗುವುದರಿಂದ ಇದು ಸಂಘಟನೆಗೆ ದೊಡ್ಡ ಶಕ್ತಿಯಾಗಿ ರೂಪುಗೊಳ್ಳಲಿದೆ ಎನ್ನುವ ನಿಟ್ಟಿನಲ್ಲಿ ಬಿಜೆಪಿ ಹೆಜ್ಜೆ ಇಡುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
