ಬೆಂಗಳೂರು:ರಾಜ್ಯಪಾಲರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಗುರುವಾರ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‍ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೆ, ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ, ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ.
ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
