ಬೆಂಗಳೂರು:ಇಂದು ಬೆಂಗಳೂರಿನ ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ನಡೆದ ಸದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಆರ್​. ಅಶೋಕ್​, 11 ಪ್ರಶ್ನೆಗಳನ್ನು ಕೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:A Devotee Dog In Vijayapura | ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದ ಶ್ವಾನ; ವಿಡಿಯೋ ವೈರಲ್​
ರಾಜ್ಯ ಸರ್ಕಾರಕ್ಕೆ ಆರ್. ಅಶೋಕ್​ ಮುಂದಿಟ್ಟ ಹನ್ನೊಂದು ಪ್ರಶ್ನೆಗಳು ಹೀಗಿವೆ:
1. ನಮ್ಮ ಮೇಲೆ 40% ಅಂತ ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ನಿಮ್ಮ ಮೇಲೆ 15% ಕಮಿಷನ್ ಆರೋಪ ಮಾಡಿದ್ದಾರೆ. ಇದಕ್ಕೆ ನಿಮ್ಮ ಉತ್ತರವೇನು?
2. ನೀವು ಕಮಿಷನ್ ಕೇಳಿಲ್ಲ ಎಂದು ಹೇಳುತ್ತೀರಿ. ಗುತ್ತಿಗೆದಾರರು ಅಜ್ಜಯ್ಯನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಿ ಹೇಳಿ ಎಂದು ಹೇಳುತ್ತಾರೆ. ಈ ಸವಾಲನ್ನು ಯಾಕೆ ಒಪ್ಪಿಕೊಂಡಿಲ್ಲ?
3. ಕಮಿಷನ್ ದಂಧೆ ಶುರು ಮಾಡಿರೋದು ಲೋಕಸಭೆ ಚುನಾವಣೆಗೆ ಫಂಡ್‌ ಸಂಗ್ರಹಕ್ಕಾಗಿಯೇ?
4. ಗುತ್ತಿಗೆದಾರರ ಹಿತಾಸಕ್ತಿ ಕಾಪಾಡುವುದಾಗಿ ವಾಗ್ದಾನ ಮಾಡಿ ಅಧಿಕಾರ ಹಿಡಿದ ನೀವು, ಈಗ ಅವರನ್ನು ಕಡೆಗಣಿಸುತ್ತಿರುವುದು ಎಷ್ಟು ಸರಿ?
ಇದನ್ನೂ ಓದಿ:ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಬರೆದ ಪ್ರಕರಣ: ಸಿಐಡಿ ಅಧಿಕಾರಿಗಳಿಂದ ವಿಚಾರಣೆ
5. ಬಿಬಿಎಂಪಿಯಲ್ಲಿ 2019-2023 ರವರೆಗೆ ನಡೆದಿರುವ ಕಾಮಗಾರಿಗಳನ್ನು ಮಾತ್ರ ತನಿಖೆ ಮಾಡ್ತಿದ್ದೀರಿ, ನೀವು ಪ್ರಾಮಾಣಿಕರಾಗಿದ್ದರೆ 2013 ರಿಂದಲೂ ತನಿಖೆ ಮಾಡಬಹುದಲ್ಲಾ?
6. ಗುತ್ತಿಗೆದಾರರೆಲ್ಲರೂ ಕಳ್ಳರಾದರೆ, 50 ವರ್ಷ ರಾಜ್ಯವಾಳಿದ ಕಾಂಗ್ರೆಸ್ ಬಳುವಳಿಗರ ಇವರು?
7. ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿದರೆ ನಿಮ್ಮ ಬ್ರಾಂಡ್ ಬೆಂಗಳೂರಿನ ಕಥೆ ಏನು?
8. 300 ಜನ ಗುತ್ತಿಗೆದಾರರು ದಯಾ ಮರಣಕ್ಕೆ ಬೇಡಿಕೆ ಇಟ್ಟಿದ್ದಾರೆ, ಇದಕ್ಕೆ ಕಾಂಗ್ರೆಸ್‌ ಉತ್ತರವೇನು?
ಇದನ್ನೂ ಓದಿ:ಹಾಲಿವುಡ್ ಮಟ್ಟದಲ್ಲಿ ವೃಷಭ; ನಂದಕಿಶೋರ್ ನಿರ್ದೇಶನದ ಚಿತ್ರಕ್ಕೆ ನಿಕ್ ತರ್ಲೋ ಸಾಥ್
9. ದೆಹಲಿಯಲ್ಲಿ ಮಂತ್ರಿಗಳ ಕರೆಸಿ ಸಭೆ ಮಾಡಿದ್ದು ಲೋಕಸಭಾ ಸೀಟ್ ಗೆಲ್ಲಿಸುವುದಕ್ಕೋ ಅಥವಾ ಸೂಟ್‌ಕೇಸ್ ತುಂಬಿಸುವುದಕ್ಕೋ?
10. ಮಾನ್ಯ ಡಿ.ಕೆ. ಶಿವಕುಮಾರ್ ಅವರೇ ನಿಮ್ಮದು ಬ್ರಾಂಡ್ ಬೆಂಗಳೂರೋ ಅಥವಾ ಬ್ಲಾಕ್ ಬೆಂಗಳೂರೋ?
II. ಸಿಎಂ ಹಣ ಬಿಡುಗಡೆ ಮಾಡಿದ್ರೆ, ಡಿಸಿಎಂ ತಡೆ ಹಿಡಿದಿದ್ದಾರೆ. ಹಾಗಾದ್ರೆ ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ವೇಣುಗೋಪಾಲ್ ಸೂಚನೆ ನೀಡಿದರೆ, ಸುರ್ಜೆವಾಲ ತಡೆ ನೀಡಲು ಸೂಚನೆ ನೀಡಿದ್ರಾ? ಎಂದು ಸರಣಿ ಪ್ರಶ್ನೆಗಳನ್ನು ಆರ್​. ಅಶೋಕ್​ ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.
1 ಮಿಲಿಯನ್ ಡಾಲರ್​​ ಕ್ಲಬ್‌ ಸೇರಿದ ‘ಜೈಲರ್’​; ಸಿನಿಮಾ ನೋಡಿ ಫಿದಾ ಆದ ತಲೈವಾ ಫ್ಯಾನ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
