ಬೆಂಗಳೂರು:ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ದೊಡ್ಡ ಉರುಳಾಗಿ ಪರಿಣಮಿಸಿರುವ ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ಆಡಳಿತ ಪಕ್ಷದ ವಿರುದ್ಧ ತನ್ನ ವಾಗ್ದಾಳಿಯನ್ನು ಮುಂದುವರೆಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ.
ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ, ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ-ನಿಶ್ಚಿತ-ಖಂಡಿತ. ನೆರೆಯಿಂದ ಹಾನಿಗೊಳಗಾದ ಕನ್ನಡಿಗರ ಕಂಬನಿ ಒರೆಸುವದಕ್ಕಿಂತಲೂ, ಹೈಕಮಾಂಡ್‌ ಗೆ ಕಪ್ಪ ತಲುಪಿಸುವ ಕಾರ್ಯದಲ್ಲಿ ಮಗ್ನವಾಗಿರುವ ಸಿಎಂ-ಡಿಸಿಎಂ ಎಂದು ಕಿಡಿಕಾರಿದೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ಸರ್ಕಾರದ ಸಚಿವ ಸಂಪುಟದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಈ ಸಂಬಂಧ ಹೈಕಮಾಂಡ್​ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ. ಇದಲ್ಲದೆ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪಗಳು ಕುರಿತು ಚರ್ಚಿಸಲು ಸಿಎಂ ಹಾಗೂ ಡಿಸಿಎಂರನ್ನು ಹೈಕಮಾಂಡ್ ಕರೆಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ-ನಿಶ್ಚಿತ-ಖಂಡಿತ.#ScamRaj#ScamSultan#CongressFailsKarnataka#CongressLootsKarnatakapic.twitter.com/XJbTk07gmR
ನೆರೆಯಿಂದ ಹಾನಿಗೊಳಗಾದ ಕನ್ನಡಿಗರ ಕಂಬನಿ ಒರೆಸುವದಕ್ಕಿಂತಲೂ, ಹೈಕಮಾಂಡ್‌ ಗೆ ಕಪ್ಪ ತಲುಪಿಸುವ ಕಾರ್ಯದಲ್ಲಿ ಮಗ್ನವಾಗಿರುವ ಸಿಎಂ-ಡಿಸಿಎಂ!!!#CongressLootsKarnatakapic.twitter.com/oaBgc7UEfZ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
