ಬೆಂಗಳೂರು:ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೆ ರಾಜಕೀಯ ಪಕ್ಷಗಳು ಒಂದು ಸುತ್ತಿನ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಇತ್ತೀಚಿಗೆ ದೇಶ ವಿಭಜನೆಯ ಹೇಳಿಕೆ ನೀಡಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದ ಸಂಸದ ಡಿ.ಕೆ. ಸುರೇಶ್​ ಈಗ ತಮ್ಮ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕುಕ್ಕರ್​ ಹಂಚುವ ಮೂಲಕ ಸುದ್ದಿಯಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬಿಜೆಪಿ ಕಿಡಿಕಾರಿದೆ.
ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ!ದೇಶದ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ@DKSureshINCಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ.ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ, ಈಗ ಊರಿಗಿಂತ ಮುಂಚೆ ಮತದಾರರಿಗೆ…pic.twitter.com/ysE0kl1PPf
ಇದನ್ನೂ ಓದಿ:ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ ನಮ್ಮ ಮೆಟ್ರೋ; ಏನದು?
ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ. ದೇಶದ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್​ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ. ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ, ಈಗ ಊರಿಗಿಂತ ಮುಂಚೆ ಮತದಾರರಿಗೆ ಕುಕ್ಕರ್‌ ಹಂಚುವ ಪ್ರಮೇಯ ಬರುತ್ತಿರಲಿಲ್ಲಾ ಸುರೇಶ್‌ ಅವರೇ ಎಂದು ಟೀಕಿಸಿದೆ.
ಅಂದ ಹಾಗೆ ಕನಕಪುರದಲ್ಲಿ ನೀವು ಪ್ರತಿ ಬಾರಿ ಗೆಲ್ಲುವುದು ಗೂಂಡಾಗಿರಿಯಿಂದ ಎಂದು ತಿಳಿದಿತ್ತು, ಆದರೆ ನಿಮ್ಮ ಗೂಂಡಾ ಮನಸ್ಸಿನೊಳಗೆ ವಾಮಮಾರ್ಗದ ಕುಕ್ಕರ್‌ ವಿಶಲ್‌ ಸಹ ಇದೆ ಎಂಬುದು ಇಂದು ಜಗಜ್ಜಾಹೀರಾಗಿದೆ. ರಾಷ್ಟ್ರೀಯ ಚುನಾವಣಾ ಅವರೇ, ಮತದಾರರಿಗೆ ಕುಕ್ಕರ್‌ ಆಮಿಷ ಒಡ್ಡುತ್ತಿರುವ ಸಂಸದ ಡಿ.ಕೆ. ಸುರೇಶ್​ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ರಾಜ್ಯ ಬಿಜೆಪಿ ಘಟಕ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಆಗ್ರಹಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 16 =
Remember me
