
ಬೆಂಗಳೂರು:ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ ಜ.27ರಂದು ಬೆಂಗಳೂರಿನ ಅರಮನೆ ಆವರಣದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರು ತಿಳಿಸಿದರು.ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ವೈ.ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ಬಳಿಕ ಮೊದಲ ಕಾರ್ಯಕಾರಿಣಿ ಇದಾಗಿದೆ. ಸಿದ್ಧತೆಗಾಗಿ 10 ದಿನಗಳಿಂದ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.ಶಾಸಕರು, ಸಂಸದರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಸೇರಿದಂತೆ 900ಕ್ಕೂ ಹೆಚ್ಚು ಅಪೇಕ್ಷಿತರು ಈ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯಯೋಜನೆ ಕುರಿತು ಚರ್ಚೆ ನಡೆಯಲಿದೆ ಎಂದರು.ಬೆಂಗಳೂರಿನ 3 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರಾದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಶಾಸಕ ಕೆ.ಸಿ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಮತ್ತು ಶಾಸಕರ ಮಾರ್ಗದರ್ಶನದಲ್ಲಿ ಸಭೆಯ ಯಶಸ್ಸಿಗೆ ಪೂರ್ವತಯಾರಿ ನಡೆದಿದೆ ಎಂದು ತಿಳಿಸಿದರು.25ಕ್ಕೂ ಹೆಚ್ಚು ವೃತ್ತಗಳಲ್ಲಿ ಪ್ರಮುಖರಿಗೆ ಸ್ವಾಗತ ಕೋರಲಾಗುತ್ತಿದೆ. ಅಪೇಕ್ಷಿತರಿಗೆ ವ್ಯವಸ್ಥಿತವಾಗಿ ವಾಹನ ವ್ಯವಸ್ಥೆ, ಕೊಠಡಿ ವ್ಯವಸ್ಥೆ ಸೇರಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.ರಾಜ್ಯ ಸರಕಾರದ ಧೋರಣೆ, ಹಿಂದೂ ವಿರೋಧಿ ನೀತಿ, ಅಭಿವೃದ್ಧಿ ಕುಂಠಿತವಾದುದನ್ನು ಚರ್ಚೆ ಮಾಡಲಾಗುವುದು ಎಂದರು. ಅನೇಕ ವಿಷಯಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ಹೇಳಿದರು.ಕೇಂದ್ರದ ಜನಪರ ಯೋಜನೆಗಳ ಚರ್ಚೆ ನಡೆಯಲಿದೆ. ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ಕುರಿತ ಪ್ರದರ್ಶಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಡಿಜಿಟಲ್ ಎಂಟ್ರಿ ಮೂಲಕ ನೋಂದಣಿ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡ ಸಂಘಟನಾತ್ಮಕ ಸಭೆ ಇದಾಗಲಿದೆ ಎಂದರು.ಎಲ್ಲರಿಗೂ ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿ ಆಗಬೇಕೆಂಬ ಆಶಯವಿದೆ. ಅಂಥವರು ಸಹಸ್ರಾರು ಸಂಖ್ಯೆಯಲ್ಲಿ ಇದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿಗೆ ಬರುವವರಿಗೆ ಪಕ್ಷವು ಮುಕ್ತ ಆಹ್ವಾನ ನೀಡಿದೆ. ಅನೇಕರು ಈಗಾಗಲೇ ಪಕ್ಷ ಸೇರಿದ್ದಾರೆ. ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿ ಖಂಡಿಸಿ ಸ್ಥಳೀಯವಾಗಿ, ಗ್ರಾಮ, ನಗರ ಮಟ್ಟಗಳಲ್ಲಿ ಬಿಜೆಪಿ ಕಡೆ ಮುಖ ಮಾಡಿದ್ದಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
