ವಿಜಯಪುರ:ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪುತ್ರ ಗೋಪಾಲ ಆಕಾಂಕ್ಷಿಯಾಗಿರುವ ನಾಗಠಾಣ ಕ್ಷೇತ್ರಕ್ಕೆ ಈವರೆಗೂ ಅಭ್ಯರ್ಥಿ ಆಯ್ಕೆ ಆಖೈರುಗೊಳಿಸದ್ದರಿಂದ ಗೋಪಾಲ ಕಾರಜೋಳ ಬೆಂಬಲಿಗರು ಶುಕ್ರವಾರ ರಾತ್ರಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಬಿಜೆಪಿಯಿಂದ ಈಗಾಗಲೇ ಎರಡು ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ. ಆದರೆ ನಾಗಠಾಣ ಎಸ್​​ಸಿ ಮೀಸಲು ಕ್ಷೇತ್ರ ಬಾಕಿ ಇರಿಸಲಾಗಿದೆ. ಕೂಡಲೇ ಗೋಪಾಲ ಹೆಸರು ಅಂತಿಮಗೊಳಿಸಬೇಕೆಂದು ಬೆಂಬಲಿಗರು ಆಗ್ರಹಿಸಿದರು.
ಇದನ್ನೂ ಓದಿ:2023ರ ಅಂತಿಮ ಮತದಾರರ ಪಟ್ಟಿ: ಇಲ್ಲಿದೆ ಜಿಲ್ಲಾವಾರು, ಕ್ಷೇತ್ರವಾರು ವಿವರ
ನಾಗಠಾಣ ಕ್ಷೇತ್ರಕ್ಕೆ ಗೋಪಾಲ ಕಾರಜೋಳಗೆ ಟಿಕೆಟ್ ಕೊಡಬೇಕೆಂದು ಗೋವಿಂದ ಕಾರಜೋಳ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. ಇನ್ನೊಂದೆಡೆ ಸಂಸದ ರಮೇಶ ಜಿಗಜಿಣಗಿ ಕೂಡ ಟಿಕೆಟ್ ಬಯಸಿದ್ದಾರೆ. ಬಿಜೆಪಿಯ ಕೆಲವು ಪ್ರಭಾವಿ ನಾಯಕರು ಹಾಗೂ ಸಂಘ ಪರಿವಾರದ ಮುಖಂಡರು ಮಾಜಿ ಸಿಪಿಐ ಮಹೀಂದ್ರ ನಾಯಿಕ ಹೆಸರು ಪ್ರಸ್ತಾಪಿಸಿದ್ದರಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಈಗಾಗಲೇ ಅಧಿಸೂಚನೆ ಪ್ರಕಟಗೊಂಡಿದ್ದು, ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ನಾಗಠಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಆಗಲೇ ಟಿಕೆಟ್ ಘೋಷಿಸಿದ್ದರಿಂದ ಪ್ರಚಾರ ಚುರುಕುಗೊಂಡಿದೆ. ಆದರೆ, ಬಿಜೆಪಿ ಇನ್ನೂ ಅಭ್ಯರ್ಥಿ ಆಖೈರುಗೊಳಿಸದಿರುವುದು ಆಕಾಂಕ್ಷಿಗಳಲ್ಲಿ ತಲ್ಲಣ ಶುರುವಾಗಿದೆ. ಹೀಗಾಗಿ ಗೋಪಾಲ ಕಾರಜೋಳ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಭೀಕರ ಅಪಘಾತ: ಸತ್ತವರ ಸಂಖ್ಯೆ ಐದಕ್ಕೇರಿಕೆ; ಇಬ್ಬರು ಗಂಡ-ಹೆಂಡಿರ ಜತೆಗೆ ಒಂದು ಮಗು ಕೂಡ ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + one =
Remember me
