ನವದೆಹಲಿ:ರಾಜ್ಯದಲ್ಲಿ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದಂತೆ, ಇದೀಗ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಹಾಲಿ ಶಾಸಕ ರಾಮದಾಸ್​​ಗೆ ಟಿಕೆಟ್ ಕೈತಪ್ಪಿದ್ದು, ಕೃಷ್ಣರಾಜ ಕ್ಷೇತ್ರಕ್ಕೆ ಮೈಸೂರು‌ ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಅವರಿಗೆ ಬಿಜೆಪಿ ಮಣೆ ಹಾಕಿದೆ. ಮಹಾದೇವಪುರ ಕ್ಷೇತ್ರದಿಂದ ಅರವಿಂದ ಲಿಂಬಾವಳಿ ಬದಲು ಪತ್ನಿ ಮಂಜಳಾ ಅರವಿಂದ ಲಿಂಬಾವಳಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.
ಇದನ್ನೂ ಓದಿ:ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ; ದೇವೆಗೌಡರಿಂದ ಬಿ ಫಾರ್ಮ್ ಪಡೆಯುತ್ತಲೇ ಕಣ್ಣೀರು!
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ್ ಟೆಂಗಿನಕಾಯಿ ಅವಕಾಶ ಪಡೆದುಕೊಂಡಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ವಿರುದ್ಧ ಮಹೇಶ್ ಟೆಂಗಿನಕಾಯಿ ಈ ಬಾರಿ ಸ್ಪರ್ಧಿಸಲಿದ್ದಾರೆ. ಕೊಪ್ಪಳದಲ್ಲಿ ಕರಡಿ ಸಂಗಣ್ಣ ಸೊಸೆಗೆ ಟಿಕೆಟ್ ಮಿಸ್ ಆಗಿದ್ದು, ಮಂಜುಳಾ ಅಮರೇಶ್ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೆಬ್ಬಾಳ ಕ್ಷೇತ್ರದಿಂದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಕಟ್ಟಾ ಜಗದೀಶ್​ಗೆ ಬಿಜೆಪಿ ಟಿಕೆಟ್ ನೀಡಿದೆ.
ಇದನ್ನೂ ಓದಿ:ಅತೀ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳಲ್ಲಿ ಬೊಮ್ಮಾಯಿಗೆ 2ನೇ ಸ್ಥಾನ; ಸಿಎಂ ಆಸ್ತಿ ವಿವರ ಹೀಗಿದೆ…
ಬಿಜೆಪಿ ಬಿಡುಗಡೆ ಮಾಡಿದ್ದ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಿದೆ.
ಬಿಜೆಪಿ ಬಿಡುಗಡೆ ಮಾಡಿರುವ 10 ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 9 =
Remember me
