ಬೆಂಗಳೂರು:ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಡಾ| ಶಿವಕುಮಾರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್​.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ತೆರವುಗೊಳಿಸಿ, ಪಡಸಾಲೆಯಲ್ಲಿ ರಾಶಿ ಹಾಕಿರುವುದನ್ನು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಖಂಡಿಸಿದೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿ, ‘ಇದು ಅಹಂಕಾರದ ಅಹಂಕಾರದ ಪರಮಾವಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ:ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ
ಅಹಂಕಾರದ ಪರಮಾವಧಿ!@INCKarnatakaಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ!
ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ!…pic.twitter.com/mpr1MbGcZS
— BJP Karnataka (@BJP4Karnataka)June 1, 2023
ಆಡಳಿತ ಪಕ್ಷ ಕಾಂಗ್ರೆಸ್​ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ ಮತ್ತು ಶತ್ರುಭಾವ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜನೀಯ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ಟೀಕಿಸಿದೆ.
ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೋರಬೇಕು. ಜತೆಗೆ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಕೊಠಡಿಯೊಳಗೆ ಲಗತ್ತಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 12 =
Remember me
