ಬೆಂಗಳೂರು:ಚುನಾವಣೆ ಸಂದರ್ಭದಲ್ಲಿ ಮತ್ತು ಫಲಿತಾಂಶದ ಬಳಿಕವೂ ಲಿಂಗಾಯತ ವಿಚಾರವಾಗಿ ಕಾಂಗ್ರೆಸ್​ ವಿರುದ್ಧ ಟೀಕೆ ಮಾಡಿದ್ದ ಬಿಜೆಪಿ ಇದೀಗ ಮತ್ತೆ ಲಿಂಗಾಯತ ಅಸ್ತ್ರವನ್ನು ಪ್ರಯೋಗಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ಪಕ್ಷವನ್ನು ಗುರಿಯಾಗಿಸಿ ಲಿಂಗಾಯತ ಬಾಣ ಬಿಟ್ಟಿದ್ದಾರೆ.
ಇದನ್ನೂ ಓದಿ:ಅಡುಗೆ ತಯಾರಿಯಲ್ಲಿದ್ದ ಮಹಿಳೆಯರ ಮೇಲೇ ಬಿದ್ದ ಶಾಮಿಯಾನ; ಒಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ
ಭಾರತೀಯ ಜನತಾ ಪಾರ್ಟಿ ಲಿಂಗಾಯತ ಸಮುದಾಯವನ್ನು ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ. ಬಿಜೆಪಿ ಎಂಬುವ ಒಂದೇ ಗುಡಿ ಇದ್ದು ಎಲ್ಲರಿಗೂ ಪ್ರವೇಶವಿದೆ. ಬಿಜೆಪಿ ರಾಜ್ಯದಲ್ಲಿ ಕಡಿಮೆ ಅವಧಿಯಲ್ಲಿ ಅಧಿಕಾರ ನಡೆಸಿದ್ದರೂ ನನ್ನ ಸಮೇತವಾಗಿ ನಾಲ್ವರು ಮುಖ್ಯಮಂತ್ರಿಗಳಲ್ಲಿ ಮೂವರು ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನು ಮುಖ್ಯಮಂತ್ರಿ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ:‘ಅಜ್ಜಯ್ಯ’ನಿಗಾಗಿ ಮೀಸೆ ತೆಗೆದ್ರು ನಿರ್ದೇಶಕ ಯೋಗರಾಜ್ ಭಟ್!
ಕಾಂಗ್ರೆಸ್ ಪಕ್ಷ ಕಳೆದ ಮೂವತ್ತೈದು ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡದಿರುವುದು ಜಗತ್ತಿಗೆ ಗೊತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಲಿಂಗಾಯತ ಸಮುದಾಯದ ಮೇಲೆ ನಿಜವಾದ ಪ್ರೀತಿ ಇದ್ದರೆ ನೀವು ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಿರಿ ಎಂದಿರುವ ಬೊಮ್ಮಾಯಿ, ನಮ್ಮ ಪಕ್ಷದ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್​ಗೆ ಹೇಳಿದ್ದಾರೆ.
ಬ್ರಾಹ್ಮಣರು ಯಹೂದಿಗಳಂತೆ ಎದ್ದು ನಿಲ್ಲಬೇಕು; ಯಾವುದೇ ಕೆಲಸಕ್ಕೂ ಅಸಹ್ಯ ಪಡಬಾರದು: ರೋಹಿತ್ ಚಕ್ರತೀರ್ಥ

ಈ ಕಾರ್ ‘ರೇಂಜೇ’ ಬೇರೆ!: ಬ್ಯಾಟರಿ ಫುಲ್ ಚಾರ್ಜ್ ಮಾಡಲು ಹತ್ತೇ ನಿಮಿಷ, ಒಮ್ಮೆ ಚಾರ್ಜ್​ ಮಾಡಿದ್ರೆ 1,200 ಕಿ.ಮೀ. ಪ್ರಯಾಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + twelve =
Remember me
