
ಬೆಂಗಳೂರು:ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಸಂಸದ ಡಾ.ರಾಧಾಮೋಹನ್‌ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಡಾ.ರಾಧಾಮೋಹನ್‌ದಾಸ್ ಅವರು ಕರ್ನಾಟಕದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದು, ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಸಮರ್ಥವಾಗಿ ಮಾರ್ಗದರ್ಶನ ನೀಡಿದ್ದರು.
ವಿಜಯೇಂದ್ರ ಅಭಿನಂದನೆ:ನೂತನವಾಗಿ ರಾಜ್ಯ ಉಸ್ತುವಾರಿಯಾಗಿ ಡಾ.ರಾಧಾಮೋಹನ್‌ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ನೇಮಕಗೊಂಡಿರುವುದನ್ನು ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಸ್ವಾಗತಿಸಿ, ಅಭಿನಂದಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ, ಅವರ ಸಲಹೆ- ಮಾರ್ಗದರ್ಶನದೊಂದಿಗೆ ಪಕ್ಷವು 17 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. ಇದೇ ರೀತಿಯ ಸಂಘಟಿತ ಪ್ರಯತ್ನದಿಂದ ಮುಂದಿನ ಉಪ ಚುನಾವಣೆಗಳು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವನ್ನು ತಂದು ಕೊಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
