ಬೆಂಗಳೂರು:ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒಂದು ವರ್ಷದ ಸಾಧನೆ ಮತ್ತು ಕರೊನಾ ಕುರಿತು ಜಾಗೃತಿ ಮೂಡಿಸಲು ರಾಜ್ಯ ಬಿಜೆಪಿ ಜೂ.7ರಿಂದ 30ರವರೆಗೆ ಒಟ್ಟು 427 ವರ್ಚುವಲ್ ರ‍್ಯಾಲಿ ನಡೆಸಿದ್ದು, ಇದರಲ್ಲಿ 10.51 ಲಕ್ಷ ಮಂದಿ ಪಾಲ್ಗೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ರೈತರು, ಕಾರ್ವಿುಕರು, ಮಹಿಳಾ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, 28,421 ಮಂದಿ ಪಾಲ್ಗೊಂಡಿದ್ದರು. ಜನಸಂಪರ್ಕ ಅಭಿಯಾನದಡಿ 42,83,069 ಮನೆಗಳನ್ನು ಸಂರ್ಪಸಲಾಗಿದ್ದು, 1.29 ಕೋಟಿ ಜನರನ್ನು ಭೇಟಿಯಾಗಿ ಕರಪತ್ರ ಹಂಚಿ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಗಿದೆ. ಒಟ್ಟು 1.40 ಕೋಟಿ ಜನರನ್ನು ತಲುಪಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ:4ರಿಂದ ಕರ್ನಾಟಕ-ಕೇರಳ ಗಡಿ ಬಂದ್: ಕೇರಳ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
ಪ್ರಧಾನಿಯವರ ಕರೆಯಂತೆ ಭಾರತ ಸ್ವಾವಲಂಬಿಯಾಗಬೇಕಾದರೆ ನಾವೆಲ್ಲರೂ ಸ್ವದೇಶಿ ವಸ್ತುಗಳನ್ನು ಉಪಯೋಗಿಸಬೇಕು. ಆ ಮೂಲಕ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಸಿಗಬೇಕು. ಸ್ಥಳೀಯ ವಸ್ತುಗಳನ್ನು ಬ್ರಾಂಡಿಂಗ್ ಮಾಡಬೇಕು ಎಂಬುದಾಗಿ ಜಾಗೃತಿ ಮೂಡಿಸಿ 37 ಲಕ್ಷಕ್ಕಿಂತ ಹೆಚ್ಚು ಮನೆಗಳಲ್ಲಿ ಸ್ವದೇಶಿ ವಸ್ತು ಉಪಯೋಗಿಸುವಂತೆ ಸಂಕಲ್ಪ ಮಾಡಲಾಗಿದೆ ಎಂದರು.
6ರಂದು ಸಮಾರಂಭ:ಜನಸಂಪರ್ಕ ಅಭಿಯಾನದ ಸಮಾರೋಪ ಸಮಾರಂಭ ಜು.6ರಂದು ಸಂಜೆ 6 ಗಂಟೆಗೆ ನಡೆಯಲಿದ್ದು, 50 ಲಕ್ಷ ಜನ ಭಾಗವಹಿಸುವ ಗುರಿ ಹೊಂದಲಾಗಿದೆ. ಈ ವರ್ಚುವಲ್ ರ್ಯಾಲಿಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮುಖ್ಯ ಭಾಷಣ ಹಾಗೂ ರಾಜ್ಯ ಬಿಜೆಪಿ ಪ್ರಭಾರಿ ಮುರಳೀಧರರಾವ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ಸೇರಿ ಕೇಂದ್ರ ಸಚಿವರು, ಉಪಮುಖ್ಯಮಂತ್ರಿಗಳು, ಸಚಿವರು, ಕೇಂದ್ರ ಸರ್ಕಾರದ ಸಾಧನೆ, ಕೋವಿಡ್ ಕುರಿತು ಜಾಗೃತಿ ಮೂಡಿಸಿದ್ದಾರೆ. ಫೇಸ್​ಬುಕ್, ಟ್ವಿಟ್ಟರ್, ಎಸ್​ಎಂಎಸ್, ಆಡಿಯೋ ಕರೆ, ಯುಟ್ಯೂಬ್ ಇತ್ಯಾದಿ ಮೂಲಕ ಆನ್​ಲೈನ್ ರ‍್ಯಾಲಿ ನಡೆಯಲಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.
ರಾಜಧಾನಿ ಕೋವಿಡ್ ಸಂಕಷ್ಟ – ವಿವಿಧ ಇಲಾಖೆ ಅಧಿಕಾರಿಗಳಿಗೂ ಹೊಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + eighteen =
Remember me
