ಬೀದರ್:ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಅವರ ನೇತೃತ್ವದಲ್ಲಿ ಅನೇಕ ಅಭಿವೃದ್ಧಿಪರ ಕೆಲಸಗಳು ನಡೆಯುತ್ತಿದ್ದು, ಸಾರ್ವಜನಿಕರು ಎಲ್ಲವನ್ನೂ ಗಮನಿಸುತಿದ್ದಾರೆ. ಜನಪರ ಆಡಳಿತ ನೀಡುತ್ತಿರುವ ಬಿಜೆಪಿಗೆ ಮತ ನೀಡಿ ಮತ್ತೆ ಕರ್ನಾಟಕದಲ್ಲಿ ಕಮಲವನ್ನು ಅರಳಿಸುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.
ಭಾರತೀಯ ಜನತಾ ಪಕ್ಷ ಬೀದರ್ ನಗರ ಹಾಗೂ ದಕ್ಷಿಣ ಮಂಡಲದ ವತಿಯಿಂದ ಹಮ್ಮಿಕೊಂಡ ಬೂತ್‌ ಮಟ್ಟದ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಅಭಿಯಾನವು ರಾಜ್ಯಾದ್ಯಂತ ಇಂದಿನಿಂದ ಜ.29ರ ವರೆಗೆ ನಡೆಯಲಿದ್ದು, ಈ 9 ದಿನಗಳ ಅವಧಿಯಲ್ಲಿ ಒಂದು ಕೋಟಿ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಿದೆ. ಜೊತೆಗೆ ʻಬಿಜೆಪಿಯೇ ಭರವಸೆ, ಮತ್ತೊಮ್ಮೆ ಬಿಜೆಪಿ’ ಈ ಘೋಷವಾಕ್ಯದೊಂದಿಗೆ ಕಾರ್ಯಕರ್ತರು ಮನೆಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಕುರಿತ ಕರಪತ್ರಗಳನ್ನು ನೀಡಬೇಕು. ಸ್ಟಿಕರ್​ ಅಂಟಿಸಿ, 8000090009 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡುವ ಮೂಲಕ ಪಕ್ಷದ ಸದಸ್ಯರನ್ನಾಗಿಸಬೇಕು. ಬೂತ್​ನಲ್ಲಿ ವಾಟ್ಸ್​​ಆ್ಯಪ್​ ಗ್ರೂಪ್​ ರಚಿಸುವುದು, ಗೋಡೆ ಬರಹ ಬರೆಯುವ ಮೂಲಕ ಜಾಗೃತಿ ಮೂಡಿಸುವುದು ಮತ್ತು ಪ್ರಧಾನಿ ಅವರ ಮನ್ ಕೀ ಬಾತ್ ಆಲಿಸುವಂತೆ ವಿನಂತಿಸುವ ಕೆಲಸವನ್ನೂ ಕಾರ್ಯಕರ್ತರು ಮಾಡಬೇಕೆಂದು ಅವರು ತಿಳಿಸಿದರು.
ಬೀದರ್ ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ ಮಾತನಾಡಿ, ಈ ಅಭಿಯಾನದ ಯಶಸ್ಸಿಗಾಗಿ ಮಂಡಲದಲ್ಲಿ ಎಲ್ಲ ರೀತಿಯ ತಯಾರಿ ಹಾಗೂ ಪೂರ್ವಭಾವಿ ಸಭೆಗಳನ್ನು ನಡೆಸಿ ಮಂಡಲದ ಪ್ರತಿ ಬೂತ್‌ಮಟ್ಟದಲ್ಲಿ ಈ ಅಭಿಯಾನ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಾಂಗಲ್ಯ ಕದ್ದ ಕಳ್ಳ ಪೊಲೀಸ್ ಠಾಣೆ ಹಿಂದಿನ ಮನೆಯಲ್ಲೇ ನೆಲೆಸಿದ್ದ; ಮೊದಲ ಕಳ್ಳತನದ ಟೆನ್ಷನ್​ಗೇ 20 ಕೆ.ಜಿ. ದೇಹತೂಕ ಕಳ್ಕೊಂಡಿದ್ದ!

ಮಕ್ಕಳಾಗಲಿ ಎಂದು ಮಹಿಳೆಗೆ ಮನೆಯವರೇ ಮನುಷ್ಯರ ಎಲುಬಿನ ಪುಡಿ ತಿನ್ನಿಸಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 15 =
Remember me
