ಬೆಳಗಾವಿ:ಬಿ.ಎಸ್​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಲಿಂಗಾಯತ ಸಮಾಜ ತೀವ್ರ ಬೇಸರಗೊಂಡಿದ್ದು, ಇದರಿಂದ ಬಿಜೆಪಿಗೆ ಮುಂದೆ ದುಷ್ಟಪರಿಣಾಮ ತಪ್ಪಿದ್ದಲ್ಲ ಎಂಬ ಮಾತುಗಳು ಈಗಾಗಲೇ ಕೇಳಿಬಂದಿವೆ. ಇದೀಗ ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಕೂಡ ಅಂಥದ್ದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಒಂದು ಧರ್ಮಪೀಠದ ಜಗದ್ಗುರು ಆಗಿ ರಾಜಕೀಯ ವಿಚಾರ ಮಾತನಾಡಲು ಇಚ್ಛೆ ಪಡುವುದಿಲ್ಲ. ಆದರೆ, ಯಡಿಯೂರಪ್ಪ ಅವರಂಥ ದಕ್ಷ-ಕ್ರಿಯಾಶೀಲ ವ್ಯಕ್ತಿ ಸಿಗುವುದು ಬಹಳ ಕಷ್ಟ. ಪಕ್ಷಕ್ಕಾಗಿ, ರಾಜ್ಯದ ಅಭಿವೃದ್ಧಿಗಾಗಿ ಅವರು ಶ್ರಮಪಟ್ಟಿದ್ದು‌ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
ಬಿಎಸ್‌ವೈ ಅವರನ್ನು ಸಿಎಂ ಆಗಿ ಮುಂದುವರಿಸಿದ್ದರೆ ಚೆನ್ನಾಗಿತ್ತು. ಅವರು ವೀರಶೈವ ಧರ್ಮದ ವ್ಯಕ್ತಿಯಾದರೂ ಇಡೀ ಸಮಾಜದ ಭಾವನೆ ಅರ್ಥಮಾಡಿಕೊಂಡು ಸ್ಪಂದಿಸಿ ಕೆಲಸ ಮಾಡುವ ಸಿಎಂ ಆಗಿದ್ದರು. ಅವರಿಗೆ ವಯಸ್ಸಾಗಿದ್ದರೂ ಉಳಿದಂತಹ ಅವಧಿ ಕೊಟ್ಟಿದ್ದರೆ ಚೆನ್ನಾಗಿತ್ತು. ಇದು ಕೇವಲ ಮಠಾಧೀಶರ ಭಾವನೆಯಲ್ಲ, ಎಲ್ಲ ಸಮುದಾಯದವರ ಭಾವನೆ ಆಗಿತ್ತು. ಆಷಾಢ ಕಳೆದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ ಸಮಾಧಾನ ಇರುತ್ತಿತ್ತು ಎಂದರು.
ಇದನ್ನೂ ಓದಿ:ಮಕ್ಕಳಿಗೆ ಯಾವತ್ತಿಂದ ಸಿಗುತ್ತೆ ಕರೊನಾ ಲಸಿಕೆ?: ಆರೋಗ್ಯ ಸಚಿವರು ನೀಡಿದ ಮಾಹಿತಿ ಇಲ್ಲಿದೆ..
ಅದರಲ್ಲೂ ಎರಡನೇ ವರ್ಷದ ಸಾಧನಾ ಸಮಾವೇಶದಲ್ಲಿ ಮನಸ್ಸಿಗೆ ಆಘಾತವಾಗುವಂತ ವಿಚಾರ ಪ್ರಕಟ ಮಾಡಿ ರಾಜೀನಾಮೆ ಸಲ್ಲಿಸಿದರು. ಅವರಿಗೆ ಹೊರಗಿನ ವೈರಿಗಳಿಂತ ಅವರ ಪಕ್ಷದವರೇ ವೈರಿಗಳಾಗಿ ಕೆಲಸ ಮಾಡಿದ್ದು ಮೇಲ್ನೋಟಕ್ಕೆ ಎಲ್ಲರಿಗೂ ಗೊತ್ತಿದೆ. ಆ ನೋವನ್ನು ರಾಷ್ಟ್ರೀಯ ನಾಯಕರು ಯಾವ ರೀತಿ ಸರಿಪಡಿಸುತ್ತಾರೋ? ಆದರೆ ಬಿಎಸ್​ವೈ ಅವರ ಪದಚ್ಯುತಿಯಿಂದ ಮುಂದಿನ ದಿನಗಳಲ್ಲಿ ಬಿಜೆಪಿಗೆ ಬಹಳಷ್ಟು ಪೆಟ್ಟು ಬೀಳುವುದರಲ್ಲಿ ಸಂದೇಹವೇ ಇಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.
ಕರ್ನಾಟಕ ಸಿಎಂ ರೇಸ್​ನಲ್ಲಿ ಮಗನ ಹೆಸರು; ತಂದೆಗೆ ಅದಾಗಲೇ ಖುಷಿ!

ಎರಡೂ ಡೋಸ್ ಲಸಿಕೆ ಪಡೆದವರಿಗಿಂತಲೂ ಇವರಲ್ಲೇ ಹೆಚ್ಚು ರೋಗನಿರೋಧಕ ಶಕ್ತಿ!; ಯಾರಿವರು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − six =
Remember me
