ಮಂಡ್ಯ:ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭಗೊಂಡಿದ್ದು, ಈ ಮಧ್ಯೆ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ನೀಡಿದ ವಿವಾದಾತ್ಮಕ ಹೇಳಿಕೆಯೊಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಖಂಡಿಸಿದ ಮಂಡ್ಯ ಬಿಜೆಪಿ ಕಾರ್ಯಕರ್ತರು, ಇದೀಗ ಕಾಂಗ್ರೆಸ್ ನಾಯಕ ಬಿ.ಹರಿಪ್ರಸಾದ್ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:ಈ ಕೃಷಿ ಯೋಜನೆಯ ಬಗ್ಗೆ ಹೆಚ್ಚಿನ ಗಮನಹರಿಸಿದ ಪಾಕ್​​​ ಸೇನೆ; ಟ್ಯಾಂಕರ್​​​​​​ ಬಿಟ್ಟು ಟ್ರ್ಯಾಕ್ಟರ್‌ಗಳನ್ನು ಓಡಿಸಲು ಮುಂದಾಗಿದ್ದೇಕೆ?
ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಅಹಿತಕರ ಘಟನೆ ಕರ್ನಾಟಕದಲ್ಲಿ ಆಗಬಹುದು ಎಂದು ಹರಿಪ್ರಸಾದ್‌ ಹೇಳಿಕೆ ನೀಡಿದ್ದರು. ಸದ್ಯ ಈ ಹೇಳಿಕೆಗೆ ರಾಜ್ಯವ್ಯಾಪಿ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ.
ರಾಜ್ಯ ಮತ್ತು ದೇಶದಲ್ಲಿ ಗೋಧ್ರಾ, ಪುಲ್ವಾಮಾ ಮಾದರಿಯ ದಾಳಿ ಮರುಕಳಿಸಬಹುದೆಂಬ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ಜಿಲ್ಲಾ ಎಸ್ಪಿ ಎನ್.ಯತೀಶ್‌ಗೆ ದೂರು ನೀಡಲಾಗಿದೆ. ಜ.22ರಂದು ಶ್ರೀರಾಮಮಂದಿರ ಉದ್ಘಾಟನೆಗೆ ಇಡಿ ದೇಶವೇ ಕಾಯುತ್ತಿದೆ.‌ ಇಂತಹ ಸಂದರ್ಭದಲ್ಲಿ ಹರಿಪ್ರಸಾದ್ ಕೊಟ್ಟ ಹೇಳಿಕೆ ಆಘಾತಕಾರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:ನೈತಿಕ ಪ್ರಜ್ಞೆ ಜಾಗೃತಗೊಳಿಸುವ ಆಧ್ಯಾತ್ಮಿಕತೆ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅಭಿಮತ
ದೇಶದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಈ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ, ಹರಿಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ದೂರಿನಲ್ಲಿ ಮನವಿ ಮಾಡಿದ ಬಿಜೆಪಿ ಕಾರ್ಯಕರ್ತರು, ಮಂಪರು ಪರೀಕ್ಷೆಗೆ ಒಳಪಡಿಸುವಂತೆಯೂ ಒತ್ತಾಯಿಸಿದ್ದಾರೆ.
BBKS10: ಫಿನಾಲೆಯ ಗೆಲುವಿನ ಓಟದಲ್ಲಿ ಈ ಇಬ್ಬರು ಪಕ್ಕಾ! ನಿಮ್ಮ ಪ್ರಕಾರ ಯಾರಿರಬಹುದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − ten =
Remember me
