ಬೆಂಗಳೂರು‘ಬಿಜೆಪಿ ಅವರಿಗೆ ಮಾಡೋಕೆ ಕೆಲಸವಿಲ್ಲ. ಕೈಲಾಗದವನು ಮೈ ಪರಚಿಕೊಂಡ’ ಎಂಬ ಸ್ಥಿತಿ ಆಗಿದೆ. ಸರ್ಕಾರ ಬಂದು 100 ದಿನ ಕಳೆದರೂ, ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡುವುದಕ್ಕೆ ಆಗಿಲ್ಲ. ಕೆಲಸವಿಲ್ಲದೆ ದಿನಕ್ಕೊಬ್ಬರ ಬಗ್ಗೆ ಮಾತನಾಡುತ್ತಾರೆ. ಇವತ್ತು ನನ್ನ ಬಗ್ಗೆ, ನಾಳೆ, ಎಂ.ಬಿ. ಪಾಟೀಲ್. ನಾಡಿದ್ದು ಮತ್ತೊಬ್ಬರ ಬಗ್ಗೆ ಮಾತನಾಡುತ್ತಾರೆ. ಮಾತನಾಡಲಿ ಬಿಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದಲ್ಲಿ ಶಾಸಕರಾದ ಬಿ.ಆರ್. ಪಾಟೀಲ್ ಮತ್ತು ಅಜಯ್ ಸಿಂಗ್ ಅಸಮಾಧಾನಗೊಂಡಿದ್ದಾರೆಂದು ಬಿಜೆಪಿ ಟ್ವೀಟ್ ಮಾಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಲಿಂಗಾಯತ ನಾಯಕತ್ವವನ್ನು ಮುಗಿಸಲು ಬಿ.ಎಲ್. ಸಂತೋಷ್ ಪ್ರಯತ್ನ ಮಾಡಿದರು. ಟಿಕೆಟ್ ಹಂಚಿಕೆಯಲ್ಲಿ ದೆಹಲಿ ನಾಯಕರು ಪ್ರಭಾವ ಬೀರಿದರು ಎಂದು ಅವರದೇ ಪಕ್ಷದ ರೇಣುಕಾಚಾರ್ಯ ಸೇರಿ ಇತರೆ ಹಾಲಿ, ಮಾಜಿ ಶಾಸಕರು ಮಾತನಾಡಿರುವುದಕ್ಕೆ ಉತ್ತರ ನೀಡಲಿ. ಮೊದಲು ಅವರ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
