ಮಂಗಳೂರು:ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ತೀವ್ರ ಕಿಡಿಕಾರಿದ್ದರು. ಮುಖ್ಯಮಂತ್ರಿಗಳ ರಾಜೀನಾಮೆಗೆ ಪಟ್ಟುಹಿಡಿದ ಬಿಜೆಪಿ ವಿರುದ್ಧ ಇದೀಗ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಎಂಎಲ್​ಸಿ ಬಿ.ಕೆ. ಹರಿಪ್ರಸಾದ್, ಇವರದ್ದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಎಂದರು.
ಇದನ್ನೂ ಓದಿ:5 ರೂ.ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ; ಒಂದು ದಿನಕ್ಕೆ 400 ರಿಂದ 500 ರೋಗಿಗಳಿಗೆ ಚಿಕಿತ್ಸೆ ನೀಡುವ ಪುಣ್ಯಾತ್ಮ..
“ರಾಜ್ಯಪಾಲರು ರಾಜ ಭವನ ದುರುಪಯೋಗ ಮಾಡ್ತಿದಾರೆ. ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಸಾಧ್ಯವಿಲ್ಲ. ರಾಜ್ಯಪಾಲರು ಅವರ ಪಕ್ಷದ ಅಧ್ಯಕ್ಷರಂತೆ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ಕೆಡವುತ್ತಿತ್ತು. ಆದರೆ, ಈಗ ವಾಮಮಾರ್ಗದ ಮುಖೇನ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ” ಎಂದು ಹೇಳಿದರು.
“ಸದ್ಯ ಹೈಕೋರ್ಟ್ ರಿಲೀಫ್ ಕೊಟ್ಟಿದೆ, ನ್ಯಾಯಾಂಗ ಹೋರಾಟ ನಡೀತಿದೆ. ಯಡಿಯೂರಪ್ಪ ಪ್ರಕರಣ 20 ಕೋಟಿ ಚೆಕ್ ಮೂಲಕ ಲಂಚ ಪಡೆದಿರೋದು, ಗಡೀಪಾರಾಗಿದ್ದ ಅಮಿತ್ ಶಾ ಮಂತ್ರಿಯಾಗಿದ್ದು ಹೀಗೆ ಬಿಜೆಪಿ ನಾಯಕರ ಮೇಲೂ ಗಂಭೀರ ಆರೋಪಗಳು ಕೇಳಿಬಂದಿವೆ. ರಾಜ್ಯಪಾಲರು ಈ ಹಿಂದೆ ದಲಿತ ರಾಜಕಾರಣಿ ಆಗಿದ್ದವರು, ಗೆಹ್ಲೋಟ್ ಅವರನ್ನು ನಾನು ಹತ್ತಿರದಿಂದ ಬಲ್ಲೆ. ಬಿಜೆಪಿಯವರಿಗೆ ದಲಿತರ ಮೇಲೆ ಪ್ರೀತಿಯಿದ್ರೆ ಸಂವಿಧಾನ ಬದಲಾವಣೆ ಅಂತ ಯಾಕೆ ಮಾತನಾಡ್ತಿದ್ರು?” ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಐಪಿಎಲ್​ನಲ್ಲಿ ತಮ್ಮ ನೆಚ್ಚಿನ ಎದುರಾಳಿ ತಂಡವನ್ನು ಹೆಸರಿಸಿದ ವಿರಾಟ್; ನೀಡಿದ ಕಾರಣ ಹೀಗಿದೆ
“ನಾವು ಪ್ರತಿಭಟನೆ ಮಾಡಿದ್ದೇವೆ, ಯಾವುದೇ ಗಲಾಟೆ ಮಾಡಿಲ್ಲ. ಐವನ್ ಡಿಸೋಜಾ ಏನು ಹೇಳಿದ್ದಾರೆ ಅಂತ ನನಗೆ ಸರಿಯಾಗಿ ಗೊತ್ತಿಲ್ಲ. ಬಾಂಗ್ಲಾದೇಶ ಮತ್ತು ಭಾರತವನ್ನು ನಾವು ಒಂದು ಮಾಡೋದು ಬೇಡ, ಸಂವಿಧಾನಿಕ ಹುದ್ದೆಯಲ್ಲಿರುವವರ ವಿರುದ್ಧ ನಾವು ಹೋರಾಟ ಮಾಡೋದು ಸರಿಯಲ್ಲ. ಆದರೆ ಅವರು ತೆಗೆದುಕೊಂಡ ನಿರ್ಧಾರದ ವಿರುದ್ದ ಕಾನೂನು ಹೋರಾಟ ಮಾಡ್ತಿದ್ದೀವಿ ಅಷ್ಟೇ” ಎಂದು ಹೇಳಿದರು.
ಬರಲಿದೆ ಸಿಕ್ಸರ್​ ಸರದಾರ ಯುವರಾಜ್ ಸಿಂಗ್​ ಬಯೋಪಿಕ್ ಚಿತ್ರ​! ಶುರುವಾಯ್ತು ಫ್ಯಾನ್ಸ್​ ಕಾತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 15 =
Remember me
