ಕೊಪ್ಪಳ:ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರೇಳದೆ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್ ವಿರುದ್ಧ ಕಾಂಗ್ರೆಸ್​ ಹೈಕಮಾಂಡ್​ಗೆ ದೂರು ನೀಡುವುದಾಗಿ ಹೇಳಿಕೆ ನೀಡುವವರು ಮೊದಲು ತಾವು ಏನೆಂದು ತಿಳಿದುಕೊಳ್ಳಬೇಕು ಎಂದು ಪರೋಕ್ಷವಾಗಿ ವಿರೋಧಿಗಳಿಗೆ ಟಾಂಗ್​ ಕೊಟ್ಟಿದ್ದಾರೆ.
ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ತಳಬಾಳ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಹರಿಪ್ರಸಾದ್​ ನನ್ನ ವಿರುದ್ಧ ಹೈಕಮಾಂಡ್​ಗೆ ದೂರು ನೀಡುವವರು ಮೊದಲು ತಮ್ಮ ಮೇಲಿರುವ ಹಗರಣಗಳಿಂದ ಪಾರಾಗಲಿ. ಹಗರಣಗಳಿಂದ ಪಾರಾಗುವ ಸಲುವಾಗಿಯೇ ನನ್ನ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ನನ್ನ ವಿರುದ್ಧ ದೂರು ನೀಡುವವರು ಮೊದಲು ತಾವು ಏನೆಂದು ತಿಳಿದುಕೊಳ್ಳಬೇಕು. ತಮ್ಮ ಮೇಲಿರುವ ಹಗರಣಗಳಿಂದ ಪಾರಾಗುವ ಸಲುವಾಗಿಯೇ ನನ್ನ ವಿರುದ್ಧ ಹೈಕಮಾಂಡ್​​ಗೆ ದೂರು ನೀಡುತ್ತಿದ್ದಾರೆ. ತಮ್ಮ ವಿರುದ್ಧದ ಹಗರಣಗಳಿಂದ ಪಾರಾಗುವ ಧೈರ್ಯವಿದ್ದರೆ ನಿರಂತರವಾಗಿ ದೂರು ನೀಡುವ ಹೇಳಿಕೆಗಳನ್ನು ನೀಡುತ್ತಿರಲಿಲ್ಲ.
ಇದನ್ನೂ ಓದಿ:ಜೆಡಿಎಸ್​ ಜತೆಗಿನ ಮೈತ್ರಿ ಇನ್ನೂ ಸುದೀರ್ಘ ಚರ್ಚೆಯಾಗಿಲ್ಲ: ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ
ಪಕ್ಷದ ರಾಜ್ಯ ಉಸ್ತುವಾರಿಗೆ ದೂರು ನೀಡುವುದಾಗಿ ಕೆಲವರು ನಿರಂತರವಾಗಿ ಹೇಳುತ್ತಿದ್ದಾರೆ. ನನ್ನ ವಿರುದ್ಧ ದೂರು ಕೊಟ್ಟರೆ ಬಹಳ ಸಂತೋಷ ಉಸ್ತುವಾರಿ ಮಾತ್ರವಲ್ಲದೆ ಎಲ್ಲರಿಗೂ ದೂರು ನೀಡಲಿ ಎಂದು ಪರೋಕ್ಷವಾಗಿ ಮಾಲೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ನಂಜೇಗೌಡ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಸರ್ಕಾರ ಮೂರು ತಿಂಗಳಲ್ಲಿ ಪತನವಾಗಲಿದೆ ಎಂಬ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಹೇಳಿಕೆಗೆ ಪ್ರತಿಕ್ರಿಯಿಸಿ ಬಿಜೆಪಿಗರು ಹಗಲು ಕನಸು ಕಾಣುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ತರಹದ ಕಿತ್ತಾಟವಿಲ್ಲ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಅದರಂತೆ ನಾವು ಮುಕ್ತವಾಗಿ ಮಾತನಾಡುತ್ತೇವೆ. ಅವರಂತೆ ನಾಗ್ಪುರದಿಂದ ನಿರ್ದೇಶನ ತೆಗೆದುಕೊಂಡು ಮಾತನಾಡುವುದಿಲ್ಲ ಎಂದು ಶಾಸಕ ಯತ್ನಾಳ್​ ಹೇಳಿಕೆಗೆ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eighteen =
Remember me
