ಬೆಂಗಳೂರು:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ವಿಪಕ್ಷಗಳ ನಾಯಕರು ಜನರ ಕೆಂಗಣ್ಣಿಗೆ ಗುರಿಯಾಗಿದ್ದು, ಈ ಸಾಲಿಗೆ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು (ಜನವರಿ 03) ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಬಿ.ಕೆ. ಹರಿಪ್ರಸಾದ್​ ಜನವರಿ 22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ಸರ್ಕಾರ ರಕ್ಷಣೆ ಒದಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆಂದು ಅಯೋಧ್ಯೆಗೆ ತೆರಳುತ್ತಿರುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ಏಕೆಂದರೆ ಗೋಧ್ರಾ ಮಾದರಿಯ ದುರಂತ ಮತ್ತೆ ಸಂಭವಿಸುತ್ತದೆ ಎಂದು ನಮಗೆ ಮಾಹಿತಿ ಲಭಿಸಿದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು. ಅಯೋಧ್ಯೆ ಇತಿಹಾಸಕ್ಕೂ ಪುರಾಣಕ್ಕೂ ಬಹಳ ವ್ಯತ್ಯಾಸ ಇದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಪಕ್ಷದ ಅಭಿಪ್ರಾಯಕ್ಕೆ ಇದಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಬಕಾರಿ ನೀತಿ ಹಗರಣ; ಮೂರನೇ ಬಾರಿಗೆ ವಿಚಾರಣೆಗೆ ಗೈರಾದ ಕೇಜ್ರಿವಾಲ್
ಇದೊಂದು ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೇ  ನಾವು ಆಮಂತ್ರಣ ಇಲ್ಲದೆಯೇ ಉದ್ಘಾಟನೆಗೆ ಹೋಗುತ್ತಿದ್ದೇವು. ಆದರೆ, ಈಗ ನಡೆಯುತ್ತಿರುವುದು ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಅವರೇನು ಧರ್ಮ ಗುರುಗಳಾ ಇದು ರಾಜಕೀಯ ಕಾರ್ಯಕ್ರಮ ಎಂದು ಹೇಳಿದ್ದಾರೆ.
ನಮಗೆ ಸಿದ್ದರಾಮಯ್ಯ ಅವರೇ ರಾಮ ಎಂದು ಎಚ್. ಆಂಜನೇಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಎಲ್ಲರಿಗೂ ಭಕ್ತರು ಇರುತ್ತಾರೆ. ಕೈಲಾಸ ಆಶ್ರಮದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + fourteen =
Remember me
