ಬೆಂಗಳೂರು: ಬಿಜೆಪಿಗೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ, ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ.ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.
ಲೋಕಸಭೆ ಚುನಾವಣೆ ಸಂಬಂಧ ಗುರುವಾರ ಬಿಜೆಪಿ ಕಚೇರಿಯಲ್ಲಿ ಬಿ.ಎಲ್.ಸಂತೋಷ್ ಸಭೆ ಕರೆದಿದ್ದರು. ಈ ಸಭೆ ಕುರಿತು ಕಾಂಗ್ರೆಸ್ ಪ್ರತಿಕ್ರಿಯೆ ನೀಡಿ ಕುಟುಕಿದೆ.
ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ ಎಂದು ಕಾಂಗ್ರೆಸ್ ಹಾಸ್ಯ ಮಾಡಿದೆ. ಬಿಜೆಪಿಯ ಅಸಮಾಧಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ ರಾಜ್ಯ ಬಿಜೆಪಿ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ ಬಿ.ಎಲ್ ಸಂತೋಷ್‌ಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದು ಅನಾವರಣಗೊಂಡಿದೆ ಎಂದಿದೆ.
ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಿಜೆಪಿ ಶಾಸಕರೆಲ್ಲ ಯಡಿಯೂರಪ್ಪ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ.ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ ಎಂದು ಆರೋಪಿಸಿದೆ.
ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ ಬಿಎಸ್‌ವೈಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ. ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + thirteen =
Remember me
