ಬೆಂಗಳೂರು:ನಿನ್ನೆಯಷ್ಟೇ ಜಮ್ಮು-ಕಾಶ್ಮೀರದ ಗಡಿಪ್ರದೇಶದಲ್ಲಿ ನಡೆದಿದ್ದ ಭಯೋತ್ಪಾದಕ ಚಟುವಟಿಕೆ ದೇಶದಲ್ಲಿ ಒಂದು ರೀತಿಯ ಆತಂಕ ಹುಟ್ಟಿಸಿದ್ದರೆ, ಇಂದು ರಾಜಧಾನಿ ಬೆಂಗಳೂರಿನಲ್ಲಿ ವಾರಸುದಾರರಿಲ್ಲದೆ ಕಂಡುಬಂದ ಕಪ್ಪು ಸೂಟ್​ಕೇಸ್​ ಸಾರ್ವಜನಿಕರಲ್ಲಿ ಕೆಲಕಾಲ ಭಯ ಮೂಡಿಸಿತ್ತು.
ಮಲ್ಲೇಶ್ವರದ 18ನೇ ಅಡ್ಡರಸ್ತೆ ಸಮೀಪ ಕಪ್ಪು ಸೂಟ್​ಕೇಸ್​ ಕೆಲವು ಕಾಲ ವಾರಸುದಾರರಿಲ್ಲದೆ ಕಂಡುಬಂದಿದ್ದರಿಂದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಾಂಬ್​ ಪತ್ತೆ ದಳದೊಂದಿಗೆ ಸ್ಥಳಕ್ಕೆ ಆಗಮಿಸಬೇಕಾಯಿತು. ಸೂಕ್ತ ಎಚ್ಚರಿಕೆಯೊಂದಿಗೆ ಬಾಂಬ್​ ಪತ್ತೆ ದಳದವರು ಸೂಟ್​ಕೇಸ್​ಅನ್ನು ಪರೀಕ್ಷಿಸಿದ್ದು, ಅದು ಮಾಮೂಲಿ ಬಟ್ಟೆ ಇರುವ ಸೂಟ್​ಕೇಸ್​ ಎಂಬುದು ಖಚಿತವಾಗುತ್ತಿದ್ದಂತೆ ಸುತ್ತಮುತ್ತಲ ಜನರಲ್ಲಿ ಮೂಡಿದ್ದ ಆತಂಕ ಮರೆಯಾಯಿತು.
ಅದಾಗ್ಯೂ ಆ ಸೂಟ್​ಕೇಸ್ ಅಲ್ಲಿ ಏಕೆ ಬಂತು, ಯಾರು ಯಾಕೆ ಇಟ್ಟು ಹೋದರು ಎಂಬಿತ್ಯಾದಿ ವಿಷಯಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದಕ್ಕಾಗಿ ಸುತ್ತಮುತ್ತಲ ಸಿಸಿಟಿವಿ ಕ್ಲಿಪ್ಪಿಂಗ್​ಗಳನ್ನೂ ಪರಿಶೀಲಿಸುವ ಕೆಲಸವೂ ನಡೆಯುತ್ತಿದೆ.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
