ಚಿಕ್ಕಬಳ್ಳಾಪುರ:ರಾಜ್ಯದಲ್ಲಿ ಮತ್ತೊಂದು ಆಕಸ್ಮಿಕ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಆ ಪೈಕಿ ಮೂವರ ಪರಿಸ್ಥಿತಿ ಗಂಭೀರವಾಗಿದೆ. ಪ್ರಿಕಾಟ್​ ಲಿಮಿಟೆಡ್​ ಎಂಬ ರಾಸಾಯನಿಕ ಕಂಪನಿಯಲ್ಲಿ ಈ ಅವಘಡ ಸಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಕ್ಕಕುರಗೋಡು ಗ್ರಾಮದ ವಿದುರಾಶ್ವತ್ಥ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಿಕಾಟ್​ ಲಿಮಿಟೆಡ್​ ಕೆಮಿಕಲ್​ ಕಂಪನಿಯ ಕೆ-ಯುನಿಟ್​ನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಕಾರ್ಮಿಕರು ಸೋಡಿಯಂ ಹೈಡ್ರಾಕ್ಸೈಡ್​ ಮಿಶ್ರಣ ಮಾಡುವ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ.
ಈ ಸ್ಫೋಟದಲ್ಲಿ ಕಾರ್ಮಿಕರಾದ ಹರೀಶ್, ವೆಂಕಟೇಶ್, ರವಿಕುಮಾರ್, ಆನಂದಕುಮಾರ್, ಗೊರವಯ್ಯ ಗಾಯಗೊಂಡಿದ್ದಾರೆ. ಐವರಿಗೆ ಗೌರಿಬಿದನೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಇವರಲ್ಲಿ ವೆಂಕಟೇಶ್​, ರವಿಕುಮಾರ್, ಗೊರವಯ್ಯ ಅವರ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮಲ್ಲಿ ಈ ಲಕ್ಷಣಗಳಿದ್ದರೆ ತುರ್ತಾಗಿ ಕರೊನಾ ಲಸಿಕೆ ತೆಗೆದುಕೊಳ್ಳುವುದು ಅನಿವಾರ್ಯ..

‘ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..’: ಮೋಹನಕುಮಾರಿ ಇನ್ನಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 20 =
Remember me
