ಬೆಂಗಳೂರು:ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಬ್ಲೂ ಕಾರ್ನರ್​ ನೋಟಿಸ್​ ಜಾರಿ ಮಾಡಲಾಗಿದ್ದು, ಇಂಟರ್​ಪೋಲ್​ 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿರುವುದಾಗಿ ವಿಶೇಷ ತನಿಖಾ ತಂಡ (SIT) ತಿಳಿಸಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ ಮತ್ತು ಎಲ್ಲಿದ್ದಾರೆ ಎಂಬ ವಿಚಾರ ರಾರಿಗೂ ತಿಳಿದಿರಲಿಲ್ಲ. ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ಎಸ್ಐಟಿ ತಂಡ ಇಂಟರ್‌ಪೋಲ್‌ಗೆ ನೋಟಿಸ್ ನೀಡಿತ್ತು. ಈ ನೋಟಿಸ್‌ಗೆ ಇಂಟರ್‌ಪೋಲ್ ಉತ್ತರಿಸಿದ್ದು, ಸಿಬಿಐ ಮೂಲಕ ಎಸ್​ಐಟಿಗೆ ಮಾಹಿತಿ ನೀಡಿದೆ.
ಇದನ್ನೂ ಓದಿ:ಡಗ್​ಔಟ್​ನಲ್ಲಿ ಕಣ್ಣೀರು ಹಾಕಿದ ಹಿಟ್​ಮ್ಯಾನ್​; ವಿಡಿಯೋ ವೈರಲ್​
196 ದೇಶಗಳಿಗೆ ನೋಟಿಸ್ ತಲುಪಿಸಲಾಗಿದೆ. ಕರ್ನಾಟಕದ ಏರ್ ಪೋರ್ಟ್, ಬಂದರುಗಳು ಹಾಗೂ ಬಾರ್ಡರ್, ಚೆಕ್ ಪೋಸ್ಟ್ ಎಲ್ಲಾ ಕಡೆಯೂ ಅಲರ್ಟ್ ಘೋಷಿಸಿಲಾಗಿದೆ. ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿ ಸಿಕ್ಕಿದ್ದೇ ತಕ್ಷಣ ಹೇಳುವಂತೆ ಇಂಟರ್​ಪೋಲ್ ಹೇಳಿದೆ. ಸದ್ಯ ಎಲ್ಲಾ ದೇಶಗಳಲ್ಲೂ ಪ್ರಜ್ವಲ್ ರೇವಣ್ಣನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಅಪರಾಧ ಕರತ್ಯಗಳಲ್ಲಿ ಭಾಗಿಯಾಗಿರುವ ವ್ಯಕ್ತಿ ಯಾವುದೇ ವಿಮಾನ ನಿಲ್ದಾಣ, ಬಂದರು, ಗಡಿಯಲ್ಲಿ ಕಾಣಿಸಿಕೊಂಡರೆ ಮಾಹಿತಿ ನೀಡಲಾಗುವುದು. ಯಾವುದೇ ಒಬ್ಬ ವ್ಯಕ್ತಿಯ ಕುರಿತಾಗಿ ಹೆಚ್ಚಿನ ಮಾಹಿತಿ ಸಂಗ್ರಹ ಮಾಡಲು, ಆತನ ಗುರುತು, ಆತ ಇರುವ ನಿಖರ ಸ್ಥಳ ಹಾಗೂ ಆತನ ಚಟುವಟಿಕೆಗಳನ್ನು ಗಮನಿಸಿ ಅಪರಾಧಿಕ ಕೃತ್ಯಗಳ ತನಿಖಾ ತಂಡಕ್ಕೆ ನೆರವಾಗಲು ಬ್ಲೂ ನೋಟಿಸ್ ಜಾರಿ ಮಾಡಲಾಗುತ್ತದೆ. ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಇದೇ ನೋಟಿಸ್ ಜಾರಿಯಾಗಿದೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − 2 =
Remember me
