ರಾಮನಗರ:ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಹೆಚ್ಚಿದ್ದು, ಹಲವೆಡೆ ಕೆರೆ ಕಟ್ಟೆಗಳು ಕೋಡಿ ಒಡೆದಿವೆ. ಇದರ ಪರಿಣಾಮವಾಗಿ ಬೆಂಗಳೂರು – ಮೈಸೂರು ಹೆದ್ದಾರಿಗೂ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ದುರಸ್ಥಿ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸ್​ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ನಗರದ ವ್ಯಾಪ್ತಿಗೆ ಒಳಪಡುವ ಕುಂಬಗಳೂಡು, ಕ್ರೈಸ್ಟ್​ ಕಾಲೇಜು ಸುತ್ತ ಮುತ್ತಲ ಪ್ರದೇಶದಲ್ಲಿ ನೀರು ಹೆದ್ದಾರಿಗೆ ನುಗ್ಗಿದ್ದು, ಶನಿವಾರ ಬೆಳಿಗ್ಗೆ ಬೆಂಗಳೂರು – ಮೈಸೂರು ನಡುವಿನ ವಾಹನ ಸವಾರರು ಗಂಟೆ ಗಂಟೆ ಕಾಯುವಂತೆ ಅಗಿತ್ತು.
ಅಲ್ಲದೆ, ಅಲ್ಲಲ್ಲಿ ಹೆದ್ದಾರಿಯಲ್ಲಿಯೂ ಮಳೆ ನೀರು ನುಗ್ಗಿದ ಪರಿಣಾಮ ಉಂಟಾಗಿರುವ ಸಮಸ್ಯೆಗಳನ್ನು ಪರಿಹಾರ ಮಾಡಲು ಹೆದ್ದಾರಿ ಪ್ರಾಧಿಕಾರದಿಂದ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು – ಮೈಸೂರು ನಡುವೆ ಸಂಚಾರ ಮಾಡುವ ವಾಹನ ಸವಾರರು ಮೂರು ದಿನಗಳ ಬದಲಿ ಮಾರ್ಗ ಬಳಕೆಗೆ ಮುಂದಾಗುವಂತೆ ಜಿಲ್ಲಾ ಪೊಲೀಸರು ಸೂಚನೆ ನೀಡಿದ್ದಾರೆ.
ಬದಲಿ ಮಾರ್ಗ: ಮೈಸೂರಿನಿಂದ ಬೆಂಗಳೂರಿಗೆ ಹಾಗೂ ಬೆಂಳೂರಿನಿಂದ ಮೈಸೂರಿಗೆ ತೆರಳು ಎರಡು ಬದಲಿ ಮಾರ್ಗಗಳನ್ನು ಪೊಲೀಸರು ಸೂಚಿಸಿದ್ದಾರೆ. ಬೆಂಗಳೂರು – ಕನಕಪುರ  ಮಾರ್ಗವಾಗಿ ಮೈಸೂರಿಗೆ ಹಾಗು ಬೆಂಗಳೂರು – ಕುಣಿಗಲ್​ ಮಾರ್ಗವಾಗಿ ಮೈಸೂರಿಗೆ ತೆರಳಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − one =
Remember me
