ಬೆಂಗಳೂರು:ಮಹಾಮಾರಿ ಕರೊನಾ ವೈರಸ್​ ಔಷಧ ಸಂಬಂಧ ಆಯುರ್ವೇದ ತಜ್ಞ ಡಾ. ಗಿರಿಧರ ಕಜೆ ಅವರಿಗೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್​ಐ) ನೋಟಿಸ್​ ನೀಡಿದೆ.
ಇದನ್ನೂ ಓದಿ:ಏನೂ ಮಾಡ್ದೇ 19 ಲಕ್ಷಕ್ಕೂ ಹೆಚ್ಚು ವೀವ್ಸ್​ ಪಡೆದ ಯೂಟ್ಯೂಬರ್: ಈ ವಿಡಿಯೋ ನೋಡ್ಬೇಡಿ, ಶಾಕ್​ ಆಗ್ಬೋದು!
ಕೋವಿಡ್ ರೋಗಕ್ಕೆ ಆಯುರ್ವೇದ ಔಷಧ ಬಳಕೆ ಕುರಿತು ಅನಗತ್ಯ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಆಯುರ್ವೇದ ಔಷಧ ಇನ್ನು ಕ್ಲಿನಿಕಲ್ ಟ್ರಯಲ್​ನ ಪ್ರಾಥಮಿಕ ಹಂತದಲ್ಲಿದೆ. ಆದರೆ, ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದೆ ಎಂದು ಹೇಳಿಕೆ ನೀಡಿರುವುದಕ್ಕೆ ಬಿಎಂಸಿಆರ್​ಐ ಆಕ್ಷೇಪ ವ್ಯಕ್ತಪಡಿಸಿದೆ.
ಇದೊಂದು ಸೂಕ್ಷ್ಮ ಸಂದರ್ಭ. ಇಂತಹ ಸೂಕ್ಷ್ಮ ವಿಚಾರಗಳನ್ನು ಬಹಿರಂಗಪಡಿಸುವ ಮುನ್ನ ಸೂಕ್ತ ಆಡಳಿತ ಮಂಡಳಿಯಿಂದ ಅನುಮತಿ ಪಡೆದಿರಬೇಕೆಂಬುದು ನಿಮಗೆ ತಿಳಿದಿದೆ. ಇಂತಹ ಸಂದರ್ಭದಲ್ಲೂ ನೀವು ಬೇಜವಾಬ್ದಾರಿಯಿಂದ ವರ್ತಿಸಿದ್ದೀರಿ ಎಂದಿರುವ ಬಿಎಂಆರ್​ಸಿಐ, ಈ ಕುರಿತು ತಕ್ಷಣ ಸ್ಪಷ್ಟೀಕರಣ ನೀಡಲು ಕೇಳಿದೆ. ಇಲ್ಲವಾದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬಿಎಂಆರ್​ಸಿಐ ಕಜೆ ಅವರನ್ನು ಎಚ್ಚರಿಸಿದೆ.

ಇದನ್ನೂ ಓದಿ:ಮ್ಯಾನ್ಮರ್​ ಸುಂದರಿಯ ಸೊಂಟದ ಸುತ್ತಳತೆ ಕೇಳಿದ್ರೆ ತಲೆ ತಿರುಗುತ್ತೆ: ಇದು ವಿಶ್ವದಾಖಲೆಯಂತೆ!
ಅಂದಹಾಗೆ ಕಜೆ ಅವರು ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 10 ಸೋಂಕಿತರ ಮೇಲೆ ಪ್ರಯೋಗ ನಡೆಸಿದ್ದರು. ಕೇವಲ 9 ದಿನದಲ್ಲಿ ಎಲ್ಲರೂ ಗುಣಮುಖರಾಗಿ ನೆಗೆಟಿವ್ ವರದಿಯೊಂದಿಗೆ ಮನೆಗೆ ತೆರಳಿದ್ದರು ಎಂದು ಈ ಹಿಂದೆ ವರದಿಯಾಗಿತ್ತು. ಕಜೆ ನೇತೃತ್ವದಲ್ಲಿ ನಡೆದ ಈ ಯಶಸ್ಸಿನ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಂದಿನ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿತ್ತು.(ದಿಗ್ವಿಜಯ ನ್ಯೂಸ್​)
ಕರೊನಾಕ್ಕೆ ಆಯುರ್ವೇದ ಚಿಕಿತ್ಸೆ ಸಕ್ಸಸ್: ಬೆಂಗಳೂರಲ್ಲಿ ಕ್ಲಿನಿಕಲ್ ಟ್ರಯಲ್ ಯಶಸ್ವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
