
ಬೆಂಗಳೂರು:ಕನ್ನಡ ಎನ್ನುವುದು ಭಾಷೆಯಷ್ಟೆ ಅಲ್ಲ. ಅದು ಸಾವಿರಾರು ವರ್ಷಗಳಿಂದ ಅರಳಿರುವ ಈ ನೆಲದಲ್ಲಿ ಸಂಸ್ಕೃತಿ. ಅದನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಸಂಘಟಿತವಾಗಿ ಮುಂದಾಗಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.ಯಲಹಂಕ ಬಿ.ಎಂ.ಎಸ್. ವಾಸ್ತುಶಿಲ್ಪ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ದಸರಾ ವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕನ್ನಡಿಗರ ಔದಾರ್ಯ ದೊಡ್ಡದು. ಆ ಕಾರಣಕ್ಕಾಗಿಯೇ ನಾವು ಅನ್ಯ ಭಾಷಿಕರನ್ನು ನಮ್ಮವರನ್ನಾಗಿ ಮಾಡಿಕೊಳ್ಳುತ್ತೇವೆ. ಆದರೆ ಇದೇ ಔದಾರ್ಯವನ್ನು ಬೇರೆ ಭಾಷಿಕರಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ನಮ್ಮಲ್ಲಿರುವ ಅನ್ಯ ಭಾಷಿಕರಿಗೂ ಕನ್ನಡ ಕಲಿಸುವ ಕೆಲಸ ಆಗಬೇಕು ಎಂದರು.ಅಂದು ಸಿಲ್ಕ್ ಸಿಟಿಯಾಗಿದ್ದ ಬೆಂಗಳೂರು ಸಿಲಿಕಾನ್ ಸಿಟಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಎಜುಕೇಶನ್ ಹಬ್ ಆಗಿಯೂ ಗುರುತಿಸಿಕೊಂಡಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಲಹೆ ನೀಡಿದರು.ವಿದ್ಯಾರ್ಥಿ ಜೀವನ ಮತ್ತೆ ಬರುವುದಿಲ್ಲ. ನಿಮ್ಮ ವ್ಯಕ್ತಿತ್ವ ರೂಪಿಸಿದ ತಂದೆ ತಾಯಿ ಅವರ ಶ್ರಮವನ್ನು ಸದಾ ನೆನಪಿನಲ್ಲಿ ಇಟ್ಟುಕೊಂಡು ಸಾಧಕರಾಗಿ ಹೊರಬನ್ನಿ ಎಂದು ಕರೆ ನೀಡಿದರು.ಕಾಲೇಜಿನ ನಿರ್ದೇಶಕಿ ಡಾ.ಶೈಲಾ ಬಂಟನೂರ ಮಾತನಾಡಿ, ಹಲವು ವೈವಿಧ್ಯಮಯ ಸಂಸ್ಕೃತಿಗಳನ್ನು ಹೊಂದಿರುವ ಕನ್ನಡಿಗರು ಸಹನಾಶೀಲರು ಮತ್ತು ಸಾಧಕರಾಗಿದ್ದಾರೆ ಎಂದು ತಿಳಿಸಿದರು.ವೇದಿಕೆಯಲ್ಲಿ ಡೀನ್ ಸುನಿಲ್ ಕುಮಾರ್, ಪ್ರೊ.ಶಶಾಂಕ್ ಚಕ್ರದೇವ್, ಆಡಳಿತಾಧಿಕಾರಿ ಶ್ಯಾಮಸುಂದರ, ಸಂಯೋಜಕ ರಾಕೇಶ್, ವಿದ್ಯಾರ್ಥಿ ಸಂಘಟಕರಾದ ಸಮೃದ್, ಚಿರಂತ್, ಯಶವಂತ್ ಹಾಜರಿದ್ದರು.ಕಾಲೇಜಿನ ಒಳಾಂಗಣ ಮತ್ತು ಹೊರಾಂಗಣ ಶೃಂಗರಿಸಿ ಕನ್ನಡ ಹಬ್ಬದ ವಾತಾವರಣವನ್ನು ಸೃಷ್ಟಿ ಮಾಡಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − two =
Remember me
