ಕೋಲಾರ:ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೋಲಾರ ಮೂಲದ ಯೋಧ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದ ಯೋಧ ಚೇತನ್(22) ಮೃತರು. ಇವರ ತಂದೆ ಸುರೇಶ್ ನಿವೃತ್ತ ಯೋಧರು. ತಂದೆಯಂತೇ ತಾನೂ ಕೂಡ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಬೇಕೆಂದು ಮಹತ್ತರ ಆಸೆಯೊಂದಿಗೆ ಸೇನೆಗೆ ಸೇರಿದ್ದ ಚೇತನ್​, ಚೆನ್ನೈ ರೆಜಿಮೆಂಟ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೂರು ವರ್ಷ ಪೂರೈಸಿದ್ದ ಚೇತನ್, ರಜೆ ಮೇಲೆ ಊರಿಗೆ ಆಗಮಿಸಿದ್ದರು.
ಅ.7ರಂದು ಬೆಂಗಳೂರಿನ ಕಾಮಾಕ್ಷಿಪಾಳ್ಯ ಬಳಿ ಚೇತನ್​ಗೆ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಗಾಯಗೊಂಡ ಚೇತನ್​ರನ್ನು ಯಲಹಂಕ ಬಳಿಯ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು(ಗುರುವಾರ) ಮೃತಪಟ್ಟರು. ಮಗನ ಸಾವಿನ ಸುದ್ದಿ ಕೇಳಿ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ವಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಕಣ್ವ ಸೊಸೈಟಿ ವಂಚನೆ: ಕ್ಲೇಮ್​ಗೆ ಗ್ರಾಹಕರ ನೂಕುನುಗ್ಗಲು; ವಿವಿ ಟವರ್​ನಲ್ಲಿ ಅರ್ಜಿ ಸಲ್ಲಿಸಲು ಸಾವಿರಾರು ಜನರ ಕ್ಯೂ

ಇಂತಹ ಹೆಂಗಸು ನನಗೆ ಬೇಡ, ಮಗನೇ ನಿನ್ನ ಅಮ್ಮ ಸರಿಯಿಲ್ಲ, ಆಕೆ ಜತೆ ಇರಬೇಡ… ಎಂದು ಮನದ ನೋವು ಬಿಚ್ಚಿಟ್ಟು ದುರಂತ ಅಂತ್ಯ ಕಂಡ ತಂದೆ!

ಆಕ್ಯುಪಂಕ್ಚರ್​ ಚಿಕಿತ್ಸೆ ನೆಪದಲ್ಲಿ ಲೈಂಗಿಕ ದೌರ್ಜನ್ಯ! ಬೆಚ್ಚಿಬೀಳಿಸುತ್ತೆ ಬೆಂಗಳೂರಿನ ನಕಲಿ ವೈದ್ಯನ ಕರ್ಮಕಾಂಡ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
