ಬೆಂಗಳೂರು:ತಮಗಿದ್ದ ಅನುಕೂಲತೆಯನ್ನೇ ದುರ್ಬಳಕೆ ಮಾಡಿಕೊಂಡು ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಬಿಎಂಟಿಸಿ ಬಸ್​ ಚಾಲಕ ಹಾಗೂ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಹಾಗೂ ಶರಣಬಸಪ್ಪ ಎಂಬ ಬಿಎಂಟಿಸಿ ನೌಕರರು ಬಂಧಿತರು.
ವಿಠ್ಠಲ್ ಭಜಂತ್ರಿ ಹಾಗೂ ಶರಣಬಸಪ್ಪ ಬಿಎಂಟಿಸಿಯಲ್ಲಿ ಚಾಲಕ, ನಿರ್ವಾಹಕ ಆಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಬಸ್​ಗಳಲ್ಲಿ ತಮಗೆ ಮುಕ್ತವಾಗಿ ಓಡಾಡಲು ಇದ್ದ ಅವಕಾಶವನ್ನು ದುರ್ಬಳಕೆ ಮಾಡಿಕೊಂಡಿದ್ದರು. ಕೆಂಗೇರಿ ಸಮೀಪದ ತುರಹಳ್ಳಿ ಅರಣ್ಯ ಪ್ರದೇಶವನ್ನೇ ಅಡ್ಡೆ ಮಾಡಿಕೊಂಡಿದ್ದ ಆರೋಪಿಗಳು ಕಳೆದ ಮೂರು ವರ್ಷಗಳಿಂದ ಗಾಂಜಾ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು.
ಇವರು ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾ ತಂದು ಒಂದು ಕಿಲೋಗ್ರಾಮ್​ಗೆ 40ರಿಂದ 50 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸುಳಿವು ಪಡೆದ ಕೆಂಗೇರಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತರಿಂದ 9.8 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮತ್ತೆ ಎದುರಾಯ್ತು ಹಬ್ಬಗಳಿಗೂ ನಿರ್ಬಂಧ; ಮನೆ-ದೇವಸ್ಥಾನಗಳ ಒಳಗಷ್ಟೇ ಹಬ್ಬ ಆಚರಿಸಿ ಎಂದು ಆದೇಶಿಸಿದ ಸರ್ಕಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
