ಚಿಕ್ಕಮಗಳೂರು:ಇಂದು ಚಿಕ್ಕಮಗಳೂರಿನಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಪ್ರಕರಣವನ್ನು ಈಗ ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದರು.
ಇದನ್ನೂ ಓದಿ:ನಾಟು ನಾಟು ಹಾಡಿಗೆ ರಾಮ್‌ಚರಣ್‌ ಜತೆ ಹೆಜ್ಜೆ ಹಾಕಿದ ಬಾಲಿವುಡ್‌ ಖಾನ್‌ತ್ರಯರು!
“ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ಬಿಜೆಪಿ ನಾಯಕರು ಈ ಬಗ್ಗೆ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ?” ಎಂದು ಹೇಳಿದರು.
“2008ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಎನ್.ಐ.ಎ, RAWಗಳ ವೈಫಲ್ಯವಲ್ಲವೇ? ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಹಾಗೂ ಹಿಂದೊಮ್ಮೆ ಬಿಜೆಪಿ ಕಚೇರಿ ಮುಂದೆಯೇ ಬಾಂಬ್ ಸ್ಫೋಟವಾಗಿತ್ತು. ಆಗ ಬಿಜೆಪಿಯೇ ಅಧಿಕಾರದಲ್ಲಿದ್ದರು. ಅವರಂತೆಯೇ ಇದನ್ನು ನಾವು ರಾಜಕೀಯ ದೃಷ್ಟಿಯಿಂದ ನೋಡಿದೆವಾ?” ಎಂದು ಕಿಡಿಕಾರಿದರು.
ಮದುವೆಗೂ ಮುನ್ನ ಆರೋಗ್ಯ ಸಮಸ್ಯೆ ತೋಡಿಕೊಂಡ ಅನಂತ್​; ಮಗನ ಮಾತಿಗೆ ಕಣ್ಣೀರಿಟ್ಟ ಮುಖೇಶ್ ಅಂಬಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
