ಬೆಂಗಳೂರು:ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ್ದ ನಿಗೂಢ ವಸ್ತು ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಅದು ಬಾಂಬ್​ ಸ್ಫೋಟ ಎಂದು ಡಿಜಿಪಿ ಅಲೋಕ್​ ಮೋಹನ್​ ಖಚಿತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಎಂ ಮತ್ತು ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದ್ದು, ಎಫ್​ಎಸ್​ಎಲ್​ ಟೀಮ್​ ಪರಿಶೀಲನೆ ನಡೆಸುತ್ತಿದೆ.
ಎಫ್‌ಎಸ್‌ಎಲ್ ತಂಡ ಮತ್ತು ಪೊಲೀಸರ ತಂಡ ಸ್ಥಳಪರಿಶೀಲನೆ ಮಾಡಿದ್ದು, ಪ್ರಾಥಮಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಂದ ವರದಿ ಬಂದ ನಂತರ, ಖಚಿತ ಮಾಹಿತಿ ತಿಳಿಯಲಿದೆ. NIA ಮತ್ತು IBಗೆ ಮಾಹಿತಿ ನೀಡಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಡಿಜಿಪಿ ಅಲೋಕ್ ಮೋಹನ್ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × five =
Remember me
