ಬೆಂಗಳೂರು: ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿ ಸಂಘಟನೆ ಸಹಾಯದಿಂದ ಬೆಂಗಳೂರಿನಲ್ಲಿ ಬಾಂಬ್ ಸ್ಪೋಟಿಸುವುದಾಗಿ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದು, ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಗುಪ್ತದಳದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ರಾಜ್ಯದ ಎಲ್ಲ ನಗರಗಳ ಪೊಲೀಸ್ ಕಮಿಷನರ್, ಎಸ್​ಪಿ, ರೈಲ್ವೆ ಹಾಗೂ ವಿಮಾನ ನಿಲ್ದಾಣದ ರಕ್ಷಣಾ ಪಡೆಗಳ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಲಾಗಿದೆ.
ಕಾಕಿನಾಡ್ ಕೆವಿಸಿಯ ಸಿಇಒ ಹಾಗೂ ಸಂಸ್ಥಾಪಕ ಎನ್ನಲಾದ ಶ್ರೀಪಾದ್ ಎಂಬಾತ ನಿರ್ವಹಣೆ ಮಾಡುತ್ತಿರುವ ‘ಗುರುಕೇರಳ‰ರಾಮೇಶ್ವರ’ ಟ್ವೀಟರ್ ಖಾತೆಯಲ್ಲಿ ಬೆದರಿಕೆ ಟ್ವೀಟ್ ಇದೆ. ನಾನು ಬೆಂಗಳೂರಿಗೆ ಭೇಟಿ ನೀಡುತ್ತಿದ್ದೇನೆ. ಬೆಂಗಳೂರು ಮೆಟ್ರೊ ಹಾಗೂ ಯಶವಂತಪುರದ ರೈಲ್ವೆ ನಿಲ್ದಾಣಗಳಿಗೆ ವಾರದೊಳಗೆ ಸೂಕ್ತ ಭದ್ರತೆ ಕೈಗೊಳ್ಳಿ. ಐಎಸ್ ಸಹಾಯದಿಂದ ಬಾಂಬ್ ಸ್ಪೋಟಿಸಿ ವಿಮಾನ ಹಾಗೂ ರೈಲುಗಳನ್ನು ಸುಟ್ಟು ಹಾಕುತ್ತೇನೆ ಎಂದು ಟ್ವೀಟ್​ನಲ್ಲಿ ಬರೆಯಲಾಗಿದೆ. ಇದನ್ನೇ ಉಲ್ಲೇಖಿಸಿ ಗುಪ್ತದಳದ ಅಧಿಕಾರಿಗಳು ತುರ್ತು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ, ಒಬ್ಬನ ಶರಣಾಗತಿ

Sign in to your account
Please enter an answer in digits:one × 2 =
Remember me
