ಬೆಂಗಳೂರು:ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಇದೀಗ ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಶುಕ್ರವಾರ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು ‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.
ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಇದೀಗ ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್​ ಇಡಲಾಗಿದೆ ಎಂದು ಹೇಳಿದ್ದಾರೆ. ಮುಂಬೈನ ಎನ್​ಎಸ್​ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕ‌ವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ರಾಮ ಭಕ್ತ, ರಾಮನನ್ನು ಪೂಜೆ ಮಾಡುತ್ತೇನೆ; ಮುಸ್ಲಿಂ ಕಾಂಗ್ರೆಸ್‌ ಶಾಸಕ

ಆಸ್ಪತ್ರೆಯ ಬೆಡ್‌ನಲ್ಲಿ ಉರ್ಫಿ ಜಾವೇದ್; ನಿನಗೆ ಏನಾಯ್ತಮ್ಮ ಅಂದ್ರು ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
