ಬೆಂಗಳೂರು:ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ರಾಜ್ಯದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕಿಯ ಶಿಣ ಸಚಿವ ಡಾ.ಕೆ.ಸುಧಾಕರ್​ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವಾತಂತ್ರ$್ಯದ ಅಮೃತ ಮಹೋತ್ಸವದ ಈ ಕಾಲದಲ್ಲಿ ಎಲ್ಲರೂ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಂಡು ಮತ್ತೊಬ್ಬರ ಬದುಕಿಗೆ ಅಮೃತವಾಗಬೇಕು ಎನ್ನುವ ಉದ್ದೇಶದಿಂದ ಬೆಂಗಳೂರಿನ ಮೇಖ್ರಿ ಸರ್ಕಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.ಜಾಗೃತಿ ಜಾಥಾದಲ್ಲಿ ಯುವಜನರು, ಆಶಾ ಕಾರ್ಯಕರ್ತೆಯರು ಸೇರಿ ಸುಮಾರು 5 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮಾನವ ಸರಪಳಿ ನಿರ್ಮಿಸಿ ಒಬ್ಬರಿಗೊಬ್ಬರು ಸಹಕಾರ ನೀಡುವ ಸಂದೇಶ ಸಾರಲಾಗುವುದು. ಜತೆಗೆ ಆರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೆಳಗ್ಗೆ 8 ರಿಂದ 8.15 ರವರೆಗೆ ಆರೋಗ್ಯ ೇತ್ರದ ಹಲವರು ಮೂತ್ರಪಿಂಡದ ಆಕಾರದಲ್ಲಿ ನಿಂತುಕೊಂಡು ಜಾಗೃತಿ ಮೂಡಿಸಲಿದ್ದಾರೆ ಎಂದರು.
ಬೊಮ್ಮಾಯಿ ನೋಂದಣಿ: ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸನ್ಮಾನ ಮಾಡಲಿದ್ದಾರೆ. ಅಂಗಾಂಗ ಪಡೆದವರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದೇ ವೇಳೆ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಜತೆಗೆ ನಾನು ಹಾಗೂ ಅಧಿಕಾರಿಗಳೂ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ ಎಂದರು.
ಅಂಗಾಂಗ ದಾನ ಸರ್ವ ಶ್ರೇಷ್ಠ ದಾನ. ಪ್ರಧಾನಿ ನರೇಂದ್ರ ಮೋದಿ ಕೂಡ ಮನ್​ ಕೀ ಬಾತ್​ನಲ್ಲಿ ಈ ಕುರಿತು ಕರೆ ನೀಡಿದ್ದಾರೆ. ದೇಶದಲ್ಲಿ 10 ಲ ಸಾವುಗಳಾದರೆ, 0.08 ಜನರಿಂದ ಮಾತ್ರ ಅಂಗಾಂಗ ದಾನವಾಗುತ್ತಿದೆ. ಸ್ಪೇನ್​ನಲ್ಲಿ ಈ ಪ್ರಮಾಣ 40 ಆಗಿದೆ. ಕೆಲ ಸಾಮಾಜಿಕ, ಧಾರ್ಮಿಕ ಹಿನ್ನೆಲೆಯಿಂದಲೂ ಅಂಗಾಂಗ ದಾನಕ್ಕೆ ತೊಡಕುಂಟಾಗುತ್ತಿದೆ ಎಂದರು.
11 ಸಾವಿರ ಜನರ ಪ್ರತಿಜ್ಞೆ:ರಾಜ್ಯದಲ್ಲಿ ಅಂಗಾಂಗ ದಾನಕ್ಕೆ ಸಂಬಂಧಿಸಿದ ಚಟುವಟಿಕೆ ನಿರ್ವಹಣೆ ಮಾಡಲು ಜೀವಸಾರ್ಥಕತೆ ಎಂಬ ಸೊಸೈಟಿ ಇತ್ತು. ಈಗ ಸೊಟ್ಟೊ ಕರ್ನಾಟಕ ಇದೆ. ಸೊಟ್ಟೊ ಕರ್ನಾಟಕದಲ್ಲಿ ಆನ್​ಲೈನ್​ ನೋಂದಣಿಗೆ ಅವಕಾಶವಿದೆ. ಇದರಲ್ಲಿ 11 ಸಾವಿರ ಜನರು ಅಂಗಾಂಗ ದಾನಕ್ಕೆ ಪ್ರತಿೆ ಮಾಡಿದ್ದಾರೆ. ಕರ್ನಾಟಕ ಈ ವಿಚಾರದಲ್ಲಿ ಮಾದರಿಯಾಗಬೇಕಿದೆ ಎಂದು ಸಚಿವರು ಹೇಳಿದರು.
ರಾಜ್ಯದಲ್ಲಿ ಮೂತ್ರಪಿಂಡ ಬೇಕೆಂದು 4,354 ಅರ್ಜಿ ಹಾಕಿದ್ದಾರೆ. 1,141 ಜನರು ಯಕೃತ್ತು, 91 ಜನರು ಹೃದಯ ಬೇಕೆಂದು ಅರ್ಜಿ ಸಲ್ಲಿಸಿದ್ದಾರೆ. ಸೀನಿಯಾರಿಟಿ ಆಧಾರದಲ್ಲಿ ಅವರಿಗೆ ಅಂಗಾಂಗ ನೀಡಲಾಗುತ್ತದೆ ಎಂದರು.
ಬೇಕಿದೆ 4 ಲಕ್ಷ ಮೂತ್ರಪಿಂಡ:ದೇಶದಲ್ಲಿ 3&4 ಲ ಮೂತ್ರಪಿಂಡಗಳ ಅಗತ್ಯವಿದೆ. ಕೋವಿಡ್​ ಬಂದಾಗ ದಾನದ ಪ್ರಮಾಣ ಬಹಳ ಕಡಿಮೆಯಾಗಿತ್ತು. ರಾಜ್ಯದಲ್ಲಿ ನಿಮ್ಹಾನ್ಸ್​ ಹಾಗೂ ಬೌರಿಂಗ್​ ಸಂಸ್ಥೆಯಲ್ಲಿ ಮಾತ್ರ ಅಂಗಾಂಗ ದಾನ ಕೇಂದ್ರಗಳಿದ್ದವು. ಎಲ್ಲ ವೈದ್ಯಕಿಯ ಕಾಲೇಜುಗಳಲ್ಲಿ ಈ ಕೇಂದ್ರಗಳನ್ನು ನಿರ್ಮಿಸಲು ಕ್ರಮ ವಹಿಸಲಾಗಿತ್ತು. ಪರಿಣಾಮ ಈಗ 18 ಅಂಗಾಂಗ ದಾನ ಕೇಂದ್ರಗಳಿವೆ. ಅಂಗಾಂಗ ದಾನ ಮಾಡಲು ಅನೇಕರು ಮುಂದೆ ಬರುತ್ತಿರುವುದು ಭರವಸೆ ಮೂಡಿಸಿದೆ. ನಟ ಡಾ. ಪುನೀತ್​ ರಾಜ್​ಕುಮಾರ್​ ನೇತ್ರದಾನ ಮಾಡಿದ್ದರಿಂದಐದು ಜನರಿಗೆ ದೃಷ್ಟಿ ನೀಡಲಾಗಿದೆ. ನಟ ಸಂಚಾರಿ ವಿಜಯ್​ ಅಂಗಾಂಗ ಳನ್ನು ಅಳವಡಿಸಿ ಐದು ಜನರಿಗೆ ಜೀವ ನೀಡಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 7 =
Remember me
