ಬೆಂಗಳೂರು:ಇಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ನಡೆಯುತ್ತಿರುವ ವಿಳಂಬಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಈ ಹಿಂದೆ ವಿಪಕ್ಷ ನಾಯಕನ ಆಯ್ಕೆಗಾಗಿ ಬಿಜೆಪಿಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಣೆ ಮಾಡಲಾಗಿತ್ತು. ಆದರೆ ಇನ್ನೂ ವಿಪಕ್ಷ ನಾಯಕನ ಆಯ್ಕೆ ಆಗದೇ ಇದ್ದು ಸುದ್ದಿಗಾರರು ಪ್ರಶ್ನಿಸಿದಾಗ ವಿಳಂಬ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.
ಈ ಸಂದರ್ಭ ಅವರು “ಯಾವುದೇ ರೀತಿಯ ಗೊಂದಲ ಇಲ್ಲ. ವಿಪಕ್ಷ ನಾಯಕ ಆಯ್ಕೆ ವಿಳಂಬ ಆಗಿಲ್ಲ. ಈ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ಚರ್ಚೆಗೆ ಬಂದಿಲ್ಲ ಅಷ್ಟೇ. ಜುಲೈ 3ರಿಂದ ಅಧಿವೇಶನ ಶುರುವಾಗಲಿದ್ದು, ಅದಕ್ಕೂ ಮೊದಲು ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಅನೇಕ ಕಾಂಗ್ರೆಸ್ ನಾಯಕರು, ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಬಿಜೆಪಿ ಕಾಲೆಳೆದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + seventeen =
Remember me
