ದಾವಣಗೆರೆ:ರಾಜದ್ರೋಹ ಹಾಗೂ ದೇಶದ್ರೋಹದ ಕೆಲಸವನ್ನು ಕಾಂಗ್ರೆಸ್ ಮಾಡುತ್ತಾ ಬರುತ್ತಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಪ್ರಧಾನಿ ಮೋದಿಯನ್ನು ಟೀಕಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ದೇಶ, ರಾಜ್ಯದ ಹಿತದ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ… ಇನ್ನು ಮುಂದೆಯೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ; ರಾಹುಲ್ ಗಾಂಧಿ
ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡುತ್ತಾ, ಇಂದು ಡಬಲ್ ಇಂಜಿನ ಸರ್ಕಾರ ಕರ್ನಾಟಕದ ನೀರಾವರಿ ಯೋಜನೆಗೆ ಸಾಕಷ್ಟು ಅನುದಾನ ನೀಡಿದೆ. ಪ್ರಧಾನಿ ಮೋದಿ ಮನೆಮನೆಗೆ ನೀರು ಕೊಡುತ್ತಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ಸಾಕಷ್ಟು ಸಹಾಯವಾಗಿದೆ ಎಂದರು.
ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗದ ಕೆಲಸವನ್ನು ಮೋದಿ ಸರ್ಕಾರ ಮಾಡಿದೆ. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ. ರೈತರು, ಮಹಿಳೆಯರಿಗೆ ಸಹಕಾರಿಯಾಗುವಂತಹ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಬಾಕಿ ಇರುವ ಯೋಜನೆಗಳನ್ನು ಮತ್ತೆ ಅಧಿಕಾರಕ್ಕೆ ಬಂದು ಪೂರ್ಣಗೊಳಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದರು.ಇದನ್ನೂ ಓದಿ:ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ವಿರಾಮ; ಹೋರಾಟ ಸ್ಥಗಿತಗೊಳಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
